Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-06-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-06-2026)

Today's Horoscope

ನಿತ್ಯ ನೀತಿ : ಪ್ರೀತಿ ಮತ್ತು ನಗು ಎಷ್ಟು ಚಿಕ್ಕ ಪದ. ಆದರೆ, ಆ ಪದಗಳಿಗೆ ಇಡೀ ಜಗತ್ತನ್ನೇ ಗೆಲ್ಲುವ ಶಕ್ತಿ ಇದೆ. ನಗು ಇರುವ ಕಡೆ ಪ್ರೀತಿ ತುಂಬಿರುತ್ತೆ, ಪ್ರೀತಿ ತುಂಬಿರುವ ಕಡೆ ನಗು ಇರುತ್ತದೆ.

ಪಂಚಾಂಗ : ಸೋಮವಾರ, 08-06-2026
ಪರಾಭವ ನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ / ಮಾಸ: ಅಧಿಕ ಜ್ಯೇಷ್ಠ / ಪಕ್ಷ: ಕೃಷ್ಣ / ತಿಥಿ: ಅಷ್ಟಮಿ / ನಕ್ಷತ್ರ: ಶತಭಿಷಾ / ಯೋಗ: ವಿಷ್ಕಂಭ / ಕರಣ: ಬಾಲವ
ಸೂರ್ಯೋದಯ – ಬೆ.5.54
ಸೂರ್ಯಾಸ್ತ – 06.45
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ
:ಉದ್ಯೋಗದಲ್ಲಿನ ಒತ್ತಡ ಕಡಿಮೆಯಾಗಿದೆ.
ವೃಷಭ: ಸಾಧ್ಯವಾದಷ್ಟೂ ರಾತ್ರಿ ಪ್ರಯಾಣ ಮಾಡ ಬೇಡಿ. ಶತ್ರುಗಳ ಕಾಟ ಇರುತ್ತದೆ.
ಮಿಥುನ: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು.

ಕಟಕ: ವೃತ್ತಿ ಜೀವನದಲ್ಲಿ ಸವಾಲುಗಳು ಎದುರಾಗುತ್ತವೆ.
ಸಿಂಹ: ವಧು ಅಥವಾ ವರನನ್ನು ಹುಡುಕುತ್ತಿದ್ದಲ್ಲಿ ಸೂಕ್ತ ಸಂಬಂಧ ದೊರೆಯುವುದು ಕಷ್ಟ.
ಕನ್ಯಾ: ಆಭರಣ ಮಾಡಿಸಿ ಕೊಡುವ ಸಾಧ್ಯತೆಗಳು ಹೆಚ್ಚಾಗಿವೆ.

ತುಲಾ: ನಿಮ್ಮ ಅಹಂಕಾರದ ಕಾರಣಕ್ಕೆ ಹಣಕಾಸು ನಷ್ಟ ಅನುಭವಿಸಲಿದ್ದೀರಿ. ಶ್ರಮ ವಹಿಸಿ ಕೆಲಸ ಮಾಡಿ.
ವೃಶ್ಚಿಕ: ಮುಂದೆ ಯಾವಾಗಲೋ ಹಣ ಬರುತ್ತದೆ ಎಂಬ ನಿರೀಕ್ಷೆ ಇಟ್ಟುಕೊಂಡು ಸಾಲ ಮಾಡದಿರಿ.
ಧನುಸ್ಸು: ಮಕ್ಕಳ ಪ್ರಗತಿಯಲ್ಲಿ ಮಿಶ್ರ ಪ್ರತಿಫಲ ಕಾಣ ಬೇಕಾಗುತ್ತದೆ. ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ.

ಮಕರ: ಹೆಚ್ಚಿನ ಲಾಭದ ಆಸೆಗೆ ಇರುವ ಉಳಿತಾಯದ ಹಣವನ್ನು ಖರ್ಚು ಮಾಡದಿರಿ.
ಕುಂಭ: ದಂಪತಿ ಮಧ್ಯೆ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಮೀನ: ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಲಿದ್ದು, ಅದಕ್ಕೆ ಕಾರಣ ತಿಳಿದುಕೊಳ್ಳುವುದು ಕಷ್ಟವಾಗಲಿದೆ.

RELATED ARTICLES

Latest News