Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-11-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-11-2026)

ನಿತ್ಯ ನೀತಿ : ಯಾವ ವ್ಯಕ್ತಿಗೆ ಇನ್ನೊಬ್ಬರನ್ನು ಬೆಳೆಸುವ ದೊಡ್ಡ ಗುಣವಿರುತ್ತೋ, ಆ ವ್ಯಕ್ತಿ ತನಗರಿವಿಲ್ಲದಂತೆಯೇ ಬಹು ಎತ್ತರಕ್ಕೆ ಬೆಳೆದಿರುತ್ತಾನೆ.

ಪಂಚಾಂಗ : ಭಾನುವಾರ, 08-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಆಶ್ವಯುಜ / ಪಕ್ಷ: ಕೃಷ್ಣ /ತಿಥಿ: ಚತುರ್ದಶಿ / ನಕ್ಷತ್ರ: ಸ್ವಾತಿ ಪೂರ್ಣ / ಯೋಗ: ಆಯುಷಾನ / ಕರಣ: ಚತುಷ್ಪಾದ
ಸೂರ್ಯೋದಯ – ಬೆ.6.16
ಸೂರ್ಯಾಸ್ತ – 05.52
ರಾಹುಕಾಲ – 9.00-10.30
ಯಮಗಂಡ ಕಾಲ – 1.00- 3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ: ನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ವೃಷಭ: ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಮಾಡುವಿರಿ. ಮಕ್ಕಳಿಂದ ಸಂತೋಷ ಸಿಗಲಿದೆ.
ಮಿಥುನ: ಸೌಜನ್ಯತೆಯಿಂದ ನಡೆದುಕೊಳ್ಳುವುದ ರಿಂದ ನೆರೆಹೊರೆಯವರು ನಿಮಗೆ ಸ್ಪಂದಿಸುವರು.

ಕಟಕ: ವ್ಯವಹಾರಕ್ಕೆ ಸಂಬಂ ಸಿದಂತೆ ಕಾನೂನು ವಿಷಯದಲ್ಲಿ ಹೆಚ್ಚಿನ ಸಲಹೆ ಪಡೆಯುವುದು ಅನಿವಾರ್ಯವಾಗಲಿದೆ.
ಸಿಂಹ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.
ಕನ್ಯಾ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ನಿರೀಕ್ಷಿತ ಸ್ಥಾನಮಾನ ಸಿಗಲಿದೆ.

ತುಲಾ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲ.
ವೃಶ್ಚಿಕ: ಶುಭ ಸಮಾರಂಭ ಗಳು ನಡೆಯುವುದರಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ಧನುಸ್ಸು: ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಸಂತಸದ ದಿನ.

ಮಕರ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ-ಕಾರ್ಯಗಳು ಸುಸೂತ್ರವಾಗಿ ನೆರವೇರಲಿವೆ.
ಕುಂಭ: ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ ಕಾಣುವಿರಿ. ಮಕ್ಕಳಿಂದ ಶುಭವಾರ್ತೆ ಕೇಳುವಿರಿ.
ಮೀನ: ಕಹಿ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ. ಹಿರಿಯರ ಮಾತುಗಳನ್ನು ಗೌರವಿಸಿ.

RELATED ARTICLES

Latest News