ನಿತ್ಯ ನೀತಿ : ಕಾಲ ಎಷ್ಟೇ ಕಠಿಣವಾಗಿರಲಿ, ಧೈರ್ಯ ಕಳೆದುಕೊಳ್ಳಬೇಡ, ನಿನ್ನ ನಂಬಿಕೆ ಗಟ್ಟಿಯಾಗಿದ್ದರೆ ದಾರಿ ತಾನೇ ತೆರೆದುಕೊಳ್ಳುತ್ತದೆ.
ಪಂಚಾಂಗ : ಶುಕ್ರವಾರ, 09-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಕೃಷ್ಣ / ತಿಥಿ: ಚತುರ್ದಶಿ / ನಕ್ಷತ್ರ: ಉತ್ತರಾ / ಯೋಗ: ಬ್ರಹಾ/ ಕರಣ: ವಿಷ್ಠಿ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.06
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಕೆಲಸ-ಕಾರ್ಯಗಳಲ್ಲಿ ಅಲ್ಪ ವಿಳಂಬವಾಗ ಲಿದೆ. ಅಲಂಕಾರಿಕ ವಸ್ತುಗಳನ್ನು ಖರೀದಿಸುವಿರಿ.
ವೃಷಭ: ಹತ್ತಿರದ ಸ್ನೇಹಿತರಿಂದಲೇ ನಿಮ್ಮ ಬಗ್ಗೆ ಕೆಟ್ಟ ಮಾತುಗಳು ಕೇಳಿಬರಲಿವೆ.
ಮಿಥುನ: ಅನಿರೀಕ್ಷಿತ ಖರ್ಚು ಹೆಚ್ಚಾಗಲಿದೆ. ಮಾನಸಿಕ ಒತ್ತಡ.
ಕಟಕ: ಮಾನಸಿಕ ಧೈರ್ಯ, ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಧ್ಯಾನ ಮಾಡುವುದು ಒಳಿತು.
ಸಿಂಹ: ಕಾರ್ಯಸಾಧನೆಗೆ ಅಕ್ಕಪಕ್ಕದವರ ಅಡ್ಡಗಾಲು ಅಥವಾ ಸಹೋದ್ಯೋಗಿಗಳ ನಿರ್ಧಾರಗಳಿಂದ ಸಮಸ್ಯೆಯಾಗಲಿದೆ.
ಕನ್ಯಾ: ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಮಾಡುವಿರಿ. ಮಕ್ಕಳಿಂದ ಸಂತೋಷ ಸಿಗಲಿದೆ.
ತುಲಾ: ಉದ್ಯೋಗ ನಿಮಿತ್ತ ಪ್ರಯಾಣ ಮಾಡು ವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ.
ವೃಶ್ಚಿಕ:ಹಿಂಜರಿಕೆ ಮತ್ತು ಭಯದ ಸ್ವಭಾವ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಧನುಸ್ಸು: ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.
ಮಕರ: ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ. ನೀವಾಡುವ ಮಾತಿನಲ್ಲಿ ಹಿಡಿತವಿರಲಿ.
ಕುಂಭ: ಕಚೇರಿಯಲ್ಲಿ ಮಹಿಳಾ ಉದ್ಯಮಿಗಳಿಗೆ ಒತ್ತಡ ಹೆಚ್ಚಾಗಲಿದೆ. ವಾಹನ ಚಾಲನೆಯಲ್ಲಿ ಜಾಗ್ರತೆ.
ಮೀನ: ವೃತ್ತಿ ಬದಲಾವಣೆ ಮಾಡುವ ಬಗ್ಗೆ ಪತ್ನಿಯೊಂದಿಗೆ ಮತ್ತು ಸ್ನೇಹಿತರೊಂದಿಗೆ ಚರ್ಚಿಸಿ ತೀರ್ಮಾನಿಸಿ.
