ನಿತ್ಯ ನೀತಿ : ದುರ್ಜನರಿಗೆ ವಿದ್ಯೆ ಬರುವುದು ವಾದ ಮಾಡುವುದಕ್ಕೆ.ಸಂಪತ್ತು ಬರುವುದು ಅಹಂಕಾರದಿಂದ ಮೆರೆಯುವುದಕ್ಕೆ .ಶಕ್ತಿ ಹೆಚ್ಚುವುದು ದುರ್ಬಲರನ್ನು ಪೀಡಿಸುವುದಕ್ಕೆ.
ಪಂಚಾಂಗ : ಶುಕ್ರವಾರ, 11-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಶ್ರಾವಣ /ಪಕ್ಷ: ಕೃಷ್ಣ / ತಿಥಿ: ಅಮಾವಾಸ್ಯೆ / ನಕ್ಷತ್ರ: ಪೂರ್ವಾ / ಯೋಗ: ಸಾಧ್ಯ / ಕರಣ: ಕಿಂಸ್ತುಘ್ನ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.26
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಮಾಡಬೇಕೆಂದುಕೊಂಡಿರುವ ಒಳ್ಳೆಯ ಕೆಲಸ ವನ್ನು ಇಂದಿನಿಂದಲೇ ಆರಂಭಿಸುವುದು ಸೂಕ್ತ.
ವೃಷಭ: ನೆರೆಹೊರೆಯವರೊಂದಿಗೆ ಯಾವುದೇ ಕಾರಣಕ್ಕೂ ಮನಸ್ತಾಪ ಮಾಡಿಕೊಳ್ಳದಿರಿ.
ಮಿಥುನ: ಹೊಸ ಪ್ರದೇಶಕ್ಕೆ ಭೇಟಿ ನೀಡಿ ಒಳ್ಳೆಯ ಅನುಭವ ಪಡೆದುಕೊಳ್ಳಲು ಅವಕಾಶ ಸಿಗಲಿದೆ.
ಕಟಕ: ನೌಕರರಿಗೆ ಸ್ಥಾನ ಬದಲಾವಣೆ ಅಥವಾ ವರ್ಗಾವಣೆಯಾಗುವ ಸಾಧ್ಯತೆಗಳಿವೆ.
ಸಿಂಹ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.
ಕನ್ಯಾ: ಆಪ್ತರಿಂದಲೇ ಕೆಟ್ಟ ಮಾತು ಕೇಳಬೇಕಾದ ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ.
ತುಲಾ: ಆಸ್ತಿ ಸಂಬಂ ತ ತಗಾದೆಗಳಿಗೆ ನ್ಯಾಯವಾದಿಗಳ ಸಲಹೆ ಪಡೆಯಿರಿ.
ವೃಶ್ಚಿಕ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗುವುದು ಸರಿಯಲ್ಲ.
ಧನುಸ್ಸು: ಲೇವಾದೇವಿ ವ್ಯವಹಾರದಲ್ಲಿ ಧನಲಾಭವಿದೆ. ಸಮಾಧಾನದಿಂದ ವ್ಯವಹರಿಸಿ.
ಮಕರ: ಷೇರು ವ್ಯವಹಾರ ದಲ್ಲಿ ತೊಡಗಿಕೊಂಡವರಿಗೆ ಸ್ವಲ್ಪ ಮಟ್ಟಿನ ಲಾಭ ಸಿಗಲಿದೆ.
ಕುಂಭ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ಮೀನ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.
