ನಿತ್ಯ ನೀತಿ : ಬಾಂಧವ್ಯ ಹೆಚ್ಚಾದಾಗ ಕೆಟ್ಟದ್ದು ಕಾಣಿಸುವುದಿಲ್ಲ ಮತ್ತು ದ್ವೇಷ ಹೆಚ್ಚಾದಾಗ ಒಳ್ಳೆಯದೂ ಕಾಣಿಸುವುದಿಲ್ಲ.!
ಪಂಚಾಂಗ : ಶುಕ್ರವಾರ, 13-03-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್ಷ: ಕೃಷ್ಣ / ತಿಥಿ: ದಶಮಿ / ನಕ್ಷತ್ರ: ಪೂ.ಷಾ. / ಯೋಗ: ವೃತೀಪಾತ / ಕರಣ: ವಣಿಜ
ಸೂರ್ಯೋದಯ – 06.30
ಸೂರ್ಯಾಸ್ತ – 6.31
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ವೃಷಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ಮಿಥುನ: ಖರ್ಚು-ವೆಚ್ಚಗಳನ್ನು ನಿಯಂತ್ರಣದಲ್ಲಿ ಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ.
ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಸಿಂಹ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.
ತುಲಾ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮಕರ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.
ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮೀನ: ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣೆಯಿಂದ ವ್ಯವಹರಿಸುವುದು ಒಳಿತು.
