Monday, April 13, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-03-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-03-2026)

Today's Horoscope

ನಿತ್ಯ ನೀತಿ : ದೇವರ ಮೂರ್ತಿಯ ಮುಂದೆ ನಿಂತು ಕಷ್ಟಗಳೇ ಬಾರದಂತೆ ಮಾಡು ಎಂದಾಗ ಮೂರ್ತಿಯು ಮುಗುಳ್ನಗುತ್ತಾ ಹೇಳಿತು,ನಾನು ಉಳಿಪೆಟ್ಟು ತಿನ್ನದಿದ್ದರೆ, ನೀನು ನನಗೆ ಕೈ ಮುಗಿಯುತ್ತಿರಲಿಲ್ಲ.

ಪಂಚಾಂಗ : ಭಾನುವಾರ, 15-03-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್ಷ: ಕೃಷ್ಣ / ತಿಥಿ: ಏಕಾದಶಿ / ನಕ್ಷತ್ರ: ಶ್ರವಣ / ಯೋಗ: ಪರಿಘ / ಕರಣ: ಕೌಲವ
ಸೂರ್ಯೋದಯ – 06.29
ಸೂರ್ಯಾಸ್ತ – 6.31
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಷಭ: ಅನಾವಶ್ಯಕ ಚಿಂತೆ ಮಾಡುತ್ತ ಮಾನಸಿಕ ಯಾತನೆ ಹೆಚ್ಚಿಸಿಕೊಳ್ಳಲಿದ್ದೀರಿ.
ಮಿಥುನ: ಇನ್ನೊಬ್ಬರ ಒತ್ತಾಯಕ್ಕೆ ಮಣಿದು ನಿಮ್ಮ ಅಮೂಲ್ಯ ವಸ್ತುವನ್ನು ಕಳೆದುಕೊಳ್ಳುವಿರಿ.

ಕಟಕ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಸಿಂಹ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಕನ್ಯಾ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.

ತುಲಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಶ್ಚಿಕ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಧನುಸ್ಸು: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.

ಮಕರ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಕುಂಭ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಮೀನ: ಕಡಿಮೆ ಶ್ರಮದಲ್ಲಿ ಉತ್ತಮ ಲಾಭ ಪಡೆಯ ಬಹುದು. ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ.

RELATED ARTICLES

Latest News