ನಿತ್ಯ ನೀತಿ : ನಮ್ಮನ್ನು ಪ್ರೀತಿಸದಿರುವ ಆದರೆ ನಾವು ಪ್ರೀತಿಸುವ ವ್ಯಕ್ತಿಗಳ ಬೆನ್ನು ಬೀಳುವ ಬದಲು ನಮ್ಮನ್ನು ಪ್ರೀತಿಸುವ ವ್ಯಕ್ತಿಗಳ ಪ್ರೀತಿಯನ್ನು ಕಾಪಾಡಿಕೊಳ್ಳುವುದು ಶ್ರೇಯಸ್ಕರ.
ಪಂಚಾಂಗ : ಶುಕ್ರವಾರ, 16-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಆಶ್ವಯುಜ / ಪಕ್ಷ: ಶುಕ್ಲ / ತಿಥಿ: ಷಷ್ಠಿ / ನಕ್ಷತ್ರ: ಜ್ಯೇಷ್ಠಾ / ಯೋಗ: ಶೋಭನ / ಕರಣ: ಕೌಲವ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.02
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ತಂದೆ-ತಾಯಿಯರ ಹಿತವಚನವನ್ನು ಸಹನೆ ಯಿಂದ ಕೇಳುವುದು ಒಳಿತು.
ವೃಷಭ: ಧ್ಯಾನ ಮಾಡುವುದರಿಂದ ಮನಸ್ಸು ನಕಾರಾತ್ಮಕ ಭಾವನೆಯಿಂದ ಹೊರಬರಲಿದೆ.
ಮಿಥುನ: ಬಹಳ ದಿನಗಳ ನಂತರ ಕಚೇರಿಯ ಕೆಲಸ-ಕಾರ್ಯಗಳು ತೃಪ್ತಿಕರವಾಗಲಿದೆ.
ಕಟಕ: ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ ಮಾಡಬೇಕಾದ ಸಂದರ್ಭ ಬರಲಿದೆ.
ಸಿಂಹ: ಸಂಗಾತಿಯೊಂದಿಗೆ ಇದ್ದ ಕೆಲವು ಭಿನ್ನಾಭಿಪ್ರಾಯಗಳು ಬಗೆಹರಿಯಬಹುದು.
ಕನ್ಯಾ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.
ತುಲಾ: ಅಂದುಕೊಂಡ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ನೆರವೇರಲಿವೆ.
ವೃಶ್ಚಿಕ: ಆರ್ಥಿಕ ವಿಚಾರದಲ್ಲಿ ತಕ್ಕಮಟ್ಟಿನ ಸುಧಾರಣೆ ಕಂಡುಕೊಳ್ಳುವಿರಿ.
ಧನುಸ್ಸು: ವಾಹನ ಚಾಲನೆ ಹಾಗೂ ವಾಹನದಲ್ಲಿ ಪ್ರಯಾಣಿಸುವಾಗ ಹೆಚ್ಚು ಜಾಗೃತರಾಗಿರಿ.
ಮಕರ: ಅತಿಯಾದ ಆಲಸ್ಯ ನಿಮ್ಮ ಕೆಲಸಕ್ಕೆ ಅಡ್ಡಿ ಉಂಟುಮಾಡಲಿದೆ. ದೂರ ಪ್ರಯಾಣ ಬೇಡ.
ಕುಂಭ: ಆಹಾರದಲ್ಲಿನ ಬದಲಾವಣೆಯಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ.
ಮೀನ: ವೃತ್ತಿ ಜೀವನದಲ್ಲಿ ಬಹಳಷ್ಟು ಬದಲಾವಣೆ ಗಳಾಗಲಿವೆ. ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ.
