ನಿತ್ಯ ನೀತಿ : ಬಂಗಾರದ ತಟ್ಟೆಯಲ್ಲಿ ತಿಂದು… ಬೆಳ್ಳಿ ಲೋಟದಲ್ಲಿ ನೀರು ಕುಡಿಯುತ್ತಿದ್ದವನ ಶವವನ್ನು ಮೂರು ಸುತ್ತು ಸುತ್ತಿ ಒಡೆದಿದ್ದು ಮಣ್ಣಿನ ಮಡಿಕೆಯೇ ಹೊರತು ಚಿನ್ನ ಬೆಳ್ಳಿಯದ್ದಲ್ಲ..!
ಪಂಚಾಂಗ : ಮಂಗಳವಾರ, 17-02-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ಅಮಾವಾಸ್ಯೆ / ನಕ್ಷತ್ರ: ಧನಿಷ್ಕಾ / ಯೋಗ: ಪರಿಘ / ಕರಣ: ಕಿಂಸ್ತುಘ್ನ
ಸೂರ್ಯೋದಯ – 06.43
ಸೂರ್ಯಾಸ್ತ – 6.27
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ವೃಷಭ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಮಿಥುನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾ ಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಕಟಕ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.
ಸಿಂಹ: ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳ ಲಿದ್ದು, ಅದಕ್ಕೆ ಕಾರಣ ತಿಳಿದುಕೊಳ್ಳುವುದು ಕಷ್ಟವಾಗಲಿದೆ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.
ತುಲಾ: ಸಹೋದ್ಯೋಗಿ ಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.
ವೃಶ್ಚಿಕ: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ಧನುಸ್ಸು: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳು ವಿರಿ. ಮಕ್ಕಳಿಂದ ಅನುಕೂಲವಾಗಲಿದೆ.
ಮಕರ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಕುಂಭ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.
ಮೀನ: ಅಜೀರ್ಣ, ವಾಯು, ತಲೆನೋವು, ಕೀಲು ನೋವಿನಂತಹ ಆರೋಗ್ಯ ಸಮಸ್ಯೆಗಳು ಕಾಡಲಿವೆ.
