ನಿತ್ಯ ನೀತಿ : `ಇನ್ನೊಬ್ಬರನ್ನು ಆಟ ಆಡಿಸುವವರಿಗೆ ಬಹುಶಃ ತಿಳಿದಿರುವುದಿಲ್ಲ… ತನ್ನನ್ನೂ ಆಡಿಸಲು ಮತ್ತೊಬ್ಬನಿದ್ದಾನೆಂದು..!!
ಪಂಚಾಂಗ : ಬುಧವಾರ, 18-02-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್ಷ: ಶುಕ್ಲ/ ತಿಥಿ: ಪ್ರತಿಪದಾ / ನಕ್ಷತ್ರ: ಶತಭಿಷಾ / ಯೋಗ: ಶಿವ / ಕರಣ: ಬಾಲವ
ಸೂರ್ಯೋದಯ – 06.42
ಸೂರ್ಯಾಸ್ತ – 6.27
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ವೃಷಭ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.
ಮಿಥುನ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.
ಕಟಕ: ಶತ್ರುಗಳನ್ನು ಜಯಿಸುವಿರಿ. ನಿಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.
ಸಿಂಹ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮದಿ ಸಿಗಲಿದೆ.
ಕನ್ಯಾ: ಉನ್ನತ ಅಧಿಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.
ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.
ವೃಶ್ಚಿಕ: ಯಾರದ್ದೋ ಮಾತು ಕೇಳಿ ನಿಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಧನುಸ್ಸು: ನಕಾರಾತಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಮಕರ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಆಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಕುಂಭ: ಪ್ರಯತ್ನಗಳು ಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಮಕ್ಕಳಿಂದ ಸಂತೋಷ ಉಂಟಾಗುವುದು. ಆರೋಗ್ಯದ ಕಡೆ ಗಮನ ಹರಿಸಿ.
