ನಿತ್ಯ ನೀತಿ : ಕಷ್ಟಗಳಿಗೆ ಹೆದರದಿರಿ, ಮನುಷ್ಯನನ್ನು ಸಂಪೂರ್ಣವಾಗಿ ಬದಲಿಸುವ ಸಾಮರ್ಥ್ಯ ದುಃಖಕ್ಕೆ ಇದೆಯೇ ಹೊರತು ಸಂತೋಷಕ್ಕಲ್ಲ.
ಪಂಚಾಂಗ : ಗುರುವಾರ, 19-02-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್ಷ: ಶುಕ್ಲ / ತಿಥಿ: ದ್ವಿತೀಯಾ / ನಕ್ಷತ್ರ:ಪೂ.ಭಾ. / ಯೋಗ: ಸಿದ್ಧ / ಕರಣ: ತೈತಿಲ
ಸೂರ್ಯೋದಯ – 06.42
ಸೂರ್ಯಾಸ್ತ – 6.27
ರಾಹುಕಾಲ – 1.30-3.00
ಯಮಗಂಡ ಕಾಲ – 6.00- 7.30
ಗುಳಿಕ ಕಾಲ – 9.00- 10.30
ರಾಶಿಭವಿಷ್ಯ :
ಮೇಷ: ಮಿತ್ರರಲ್ಲಿ ಕಂಡುಬರುವ ಭಿನ್ನಾಭಿಪ್ರಾಯ ಹೋಗಲಾಡಿಸಲು ಯತ್ನಿಸುವಿರಿ.
ವೃಷಭ: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ. ಅತ್ಯಂತ ಎಚ್ಚರಿಕೆ ವಹಿಸಿ.
ಮಿಥುನ: ವಾಹನ ಚಾಲಕರು ಅತ್ಯಂತ ಎಚ್ಚರಿಕೆ ಯಿಂದ ಇರಬೇಕಾದ ದಿನ.
ಕಟಕ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲ.
ಸಿಂಹ: ನೀವು ಯೋಚಿಸಿ ದಂತೆಯೇ ಸನ್ನಿವೇಶಗಳು ಎದುರಾಗಿ ಅಚ್ಚರಿ ಮೂಡಿಸಲಿವೆ.
ಕನ್ಯಾ: ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಯೊಂದಿಗೆ ಮಾತುಕತೆ ನಡೆಸುವಿರಿ.
ತುಲಾ: ಮಕ್ಕಳಿಗೆ ಹಿಂದೆ ಕೊಟ್ಟಿದ್ದ ಮಾತನ್ನು ಉಳಿಸಿಕೊಳ್ಳಲು ನೀವು ಶಕ್ತಿರಾಗಿರುವಿರಿ.
ವೃಶ್ಚಿಕ: ಹಲವು ದಿನಗಳಿಂದ ಬರಬೇಕಾಗಿರುವ ಹಣ ಸಂಜೆ ವೇಳೆಗೆ ಕೈ ಸೇರುವುದು.
ಧನುಸ್ಸು: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.
ಮಕರ: ಮಗಳ ಮದುವೆಯ ಕಾರ್ಯಕಲಾಪಗಳು ಸುಗವಾಗಿ ಸಾಗುವುದರಿಂದ ನೆಮದಿ ಇರಲಿದೆ.
ಕುಂಭ: ತುರ್ತು ವಿಷಯಗಳ ಬಗ್ಗೆ ಹೆಚ್ಚಾಗಿ ಗಮನ ಹರಿಸಿ. ಕೌಟುಂಬಿಕ ಸಂಬಂಧಗಳು ಗಟ್ಟಿಗೊಳ್ಳಲಿವೆ.
ಮೀನ: ಅತಿಯಾದ ಮಾತಿನಿಂದ ಉತ್ತಮ ಅವಕಾಶವನ್ನು ಕಳೆದುಕೊಳ್ಳಬೇಕಾದಿತು.
