ನಿತ್ಯ ನೀತಿ : ಮುನ್ನಡೆಯ ಕನಸು ಕಾಣಬೇಕು, ಆದರೆ ಅದು ಸಾಕಾರವಾಗುವವರೆಗೆ ಯಾರಲ್ಲಿಯೂ ಹೇಳಿಕೊಳ್ಳಬಾರದು ಇದೇ ಯಶಸ್ಸಿನ ರಹಸ್ಯ.
ಪಂಚಾಂಗ : ಶನಿವಾರ, 19-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಶುಕ್ಲ / ತಿಥಿ: ಅಷ್ಟಮಿ / ನಕ್ಷತ್ರ: ಮೂಲಾ / ಯೋಗ: ಆಯುಷಾನ್ / ಕರಣ: ಬಾಲವ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.20
ರಾಹುಕಾಲ – 9.00-10.30
ಯಮಗಂಡ ಕಾಲ – 1.00- 3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ಜೀವನ ಸಂಗಾತಿಯ ಬೆಂಬಲ ನಿಮಗೆ ಸಿಗುತ್ತದೆ.
ವೃಷಭ: ಹಳೆ ಸ್ನೇಹಿತರೊಂದಿಗೆ ಮಾತನಾಡುವ ಮೂಲಕ ನಿಮ್ಮ ವಿಷಯಗಳನ್ನು ಹಂಚಿಕೊಳ್ಳಬಹುದು.
ಮಿಥುನ: ಮನೆಯ ಸದಸ್ಯರು ನಿಮ್ಮನ್ನು ನೋಯಿಸಿ ದ್ದರೆ, ಅವರು ನಿಮ್ಮ ಬಳಿ ಬಂದು ಕ್ಷಮೆ ಕೇಳುವರು.
ಕಟಕ: ಸಾಲದ ವ್ಯವಹಾರ ಮಾಡುವುದನ್ನು ತಪ್ಪಿಸಿ. ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುವಿರಿ.
ಸಿಂಹ: ಮಾನಸಿಕ ಒತ್ತಡ ಹೆಚ್ಚಾಗಬಹುದು. ಯೋಗ ಮಾಡುವುದರಿಂದ ಪ್ರಯೋಜನವಾಗುತ್ತದೆ.
ಕನ್ಯಾ: ಆಹಾರದ ಬಗ್ಗೆ ಗಮನ ಕೊಡುವುದು ಒಳಿತು. ಇಲ್ಲದಿದ್ದರೆ ನಿಮ್ಮ ಆರೋಗ್ಯ ಹದಗೆಡಬಹುದು. ಎಚ್ಚರಿಕೆ ವಹಿಸಿ.
ತುಲಾ: ಕೆಲಸಕ್ಕೆ ಸಂಬಂ ಸಿದಂತೆ ಹಿರಿಯರಿಂದ ಕೆಲವು ಉತ್ತಮ ಸಲಹೆಗಳನ್ನು ಪಡೆಯಬಹುದು.
ವೃಶ್ಚಿಕ: ಗುರಿ ತಲುಪುವಲ್ಲಿ ನಿಮ್ಮ ಶ್ರಮ ಸಾರ್ಥಕವೆನಿಸಲಿದೆ. ಲಕ್ಷ್ಮೀ ಪೂಜೆ ಮಾಡುವುದರಿಂದ ಮನೆಯಲ್ಲಿ ಶಾಂತಿ ನೆಲೆಸುತ್ತದೆ.
ಧನುಸ್ಸು: ಸಾಮಾಜಿಕ ಜೀವನದಲ್ಲಿ ಆಹ್ಲಾದಕರ ಅನುಭವಗಳಾಗುತ್ತವೆ.
ಮಕರ: ಒಡಹುಟ್ಟಿದವರೊಂದಿಗೆ ಸಮಯ ಕಳೆಯುವ ಅವಕಾಶ ಸಿಗಲಿದೆ ಮತ್ತು ಅವರಿಂದ ಲಾಭವೂ ದೊರೆಯುವುದು.
ಕುಂಭ: ತಂದೆಯೊಂದಿಗೆ ವೈಮನಸ್ಯವಿದ್ದರೆ ಪರಿಹರಿಸಿ ಕೊಳ್ಳಬಹುದು. ಅವರ ಮಾತಿಗೆ ಮನ್ನಣೆ ನೀಡಿ.
ಮೀನ: ಮನೆಯ ಸಾಮಗ್ರಿಗಳ ಖರೀದಿಗಾಗಿ ಹೆಚ್ಚು ಹಣ ಖರ್ಚು ಮಾಡಬೇಕಾಗಬಹುದು.
