Saturday, April 18, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-01-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-01-2026)

Today's Horoscope

ನಿತ್ಯ ನೀತಿ : ನಗುವಿನ ಹಿಂದೆ ನೋವಿದ್ದರೂ ಪರವಾಗಿಲ್ಲ.. ನಂಬಿಕೆಯ ಹಿಂದೆ ಮೋಸ ಇರಬಾರದು…

ಪಂಚಾಂಗ : ಮಂಗಳವಾರ, 20-01-2026

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ದ್ವಿತೀಯಾ / ನಕ್ಷತ್ರ:ಶ್ರವಣ / ಯೋಗ: ಸಿದ್ಧಿ/ ಕರಣ: ಬಾಲವ
ಸೂರ್ಯೋದಯ – 06.47
ಸೂರ್ಯಾಸ್ತ – 6.15
ರಾಹುಕಾಲ – 3.00- 4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :

ಮೇಷ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕುವಿರಿ. ಆಸ್ತಿ ವಿಚಾರದಲ್ಲಿ ಕಿರಿಕಿರಿ.
ವೃಷಭ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ಮಿಥುನ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.

ಕಟಕ: ತಂದೆಯವರ ಕಠಿಣ ನಡವಳಿಕೆ ನಿಮಗೆ ಸಿಟ್ಟು ಬರಿಸುತ್ತದೆ. ಶಾಂತವಾಗಿರುವುದು ಒಳಿತು.
ಸಿಂಹ: ನಿಮ್ಮ ಜನಪ್ರಿಯತೆ ಉತ್ತುಂಗದಲ್ಲಿರುತ್ತದೆ ಮತ್ತು ಇತರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವಿರಿ.
ಕನ್ಯಾ: ಸಾಧ್ಯವಾದಷ್ಟೂ ರಾತ್ರಿ ಪ್ರಯಾಣ ಮಾಡ ಬೇಡಿ.

ತುಲಾ: ಕುಟುಂಬದ ಹಿರಿಯರಿಗೆ ಪ್ರಾಮುಖ್ಯ ನೀಡಿ. ಹೊಸ ವ್ಯವಹಾರ ಪ್ರಾರಂಭಿಸಲು ಉತ್ತಮ ದಿನ.
ವೃಶ್ಚಿಕ: ವ್ಯವಹಾರದಲ್ಲಿ ಹಿತ ಶತ್ರುಗಳಿಂದ ತೊಂದರೆ. ಅವಿವಾಹಿತರಿಗೆ ವಿವಾಹ ನಿಶ್ಚಯ.
ಧನುಸ್ಸು: ಕೌಟುಂಬಿಕ ಮತ್ತು ವೈವಾಹಿಕ ಜೀವನ ಬಹಳ ಆಹ್ಲಾದಕರವಾಗಿರುತ್ತದೆ.

ಮಕರ: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾ ಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.
ಕುಂಭ: ಕೆಟ್ಟ ಆಲೋಚನೆ ಮಾಡುವುದನ್ನು ತಪ್ಪಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಮೀನ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ದೂರ ಪ್ರಯಾಣ ಮಾಡುವಿರಿ.

RELATED ARTICLES

Latest News