ನಿತ್ಯ ನೀತಿ : ದುಡ್ಡು ಇದ್ರೆ ಅದು ಖರ್ಚು ಆಗೋವರೆಗೂ ಮಾತ್ರ ಬೆಲೆ ಇರುತ್ತೆ. ಒಳ್ಳೆತನ ಇದ್ರೆ ಸಾಯೋವರೆಗೂ ಮನಸ್ಸಿನಲ್ಲಿ ಜಾಗ ಇರುತ್ತೆ..
ಪಂಚಾಂಗ : 21-01-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ತೃತೀಯಾ / ನಕ್ಷತ್ರ:ಧನಿಷ್ಕಾ / ಯೋಗ: ವ್ಯತೀಪಾತ / ಕರಣ: ತೈತಿಲ
ಸೂರ್ಯೋದಯ – 06.47
ಸೂರ್ಯಾಸ್ತ – 6.15
ರಾಹುಕಾಲ – 12.00- 1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ವೃಷಭ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಮಿಥುನ: ಶತ್ರುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ದೂರ ಸಂಚಾರ ಮಾಡದಿರಿ.
ಕಟಕ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಸಿಂಹ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.
ತುಲಾ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮಕರ: ನಿಮ ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ. ವ್ಯಾಸಂಗದಲ್ಲಿ ತೊಂದರೆ.
ಕುಂಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮೀನ: ಕಲಾವಿದರುಗಳಿಗೆ, ಪತ್ರಕರ್ತರಿಗೆ ಪ್ರಶಂಸೆಯ ಮಾತುಗಳು ಕೇಳಿಬರುವುವು.
