ನಿತ್ಯ ನೀತಿ : ಎಲ್ಲರ ಬಳಿ ಸಮಾನವಾಗಿರುವ ಆಸ್ತಿ ಎಂದರೆ ಅದು ಸಮಯ. ಅದನ್ನು ಹೇಗೆ ಹೂಡಿಕೆ ಮಾಡುತ್ತೀರಿ ಎಂಬುದು ಮುಖ್ಯ.
ಪಂಚಾಂಗ : ಬುಧವಾರ, 24-06-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ನಿಜ ಜ್ಯೇಷ್ಠ / ಪಕ್ಷ: ಶುಕ್ಲ / ತಿಥಿ: ದಶಮಿ / ನಕ್ಷತ್ರ: ಚಿತ್ರಾ / ಯೋಗ: ಪರಿಘ / ಕರಣ: ವಣಿಜ ಸೂರ್ಯೋದಯ – ಬೆ.5.55
ಸೂರ್ಯಾಸ್ತ – 06.49
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಬಹಳ ದಿನಗಳ ನಂತರ ಕಚೇರಿಯ ಕೆಲಸ-ಕಾರ್ಯಗಳಲ್ಲಿ ತೃಪ್ತಿಕರವಾಗಲಿದೆ.
ವೃಷಭ: ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ ಮಾಡಬೇಕಾದ ಸಂದರ್ಭ ಬರಲಿದೆ.
ಮಿಥುನ: ಅಂದುಕೊಂಡ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ನೆರವೇರಲಿವೆ.
ಕಟಕ: ಧ್ಯಾನ ಮಾಡುವುದರಿಂದ ಮನಸ್ಸು ನಕಾರಾತ್ಮಕ ಭಾವನೆಯಿಂದ ಹೊರಬರಲಿದೆ.
ಸಿಂಹ: ಸಂಗಾತಿಯೊಂದಿಗೆ ಇದ್ದ ಕೆಲವು ಭಿನ್ನಾಭಿಪ್ರಾಯಗಳು ಬಗೆಹರಿಯಬಹುದು.
ಕನ್ಯಾ: ತಂದೆ-ತಾಯಿಯರ ಹಿತವಚನವನ್ನು ಸಹನೆ ಯಿಂದ ಕೇಳುವುದು ಒಳಿತು.
ತುಲಾ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ. ಇಡೀ ದಿನ ಶುಭವಾಗಿರಲಿದೆ.
ವೃಶ್ಚಿಕ: ಆರ್ಥಿಕ ವಿಚಾರದಲ್ಲಿ ತಕ್ಕಮಟ್ಟಿನ ಸುಧಾರಣೆ ಕಂಡುಕೊಳ್ಳುವಿರಿ.
ಧನುಸ್ಸು: ಅತಿಯಾದ ಆಲಸ್ಯ ನಿಮ್ಮ ಕೆಲಸಕ್ಕೆ ಅಡ್ಡಿ ಉಂಟುಮಾಡಲಿದೆ. ದೂರ ಪ್ರಯಾಣ ಬೇಡ.
ಮಕರ: ವೃತ್ತಿ ಜೀವನದಲ್ಲಿ ಬಹಳಷ್ಟು ಬದಲಾವಣೆ ಗಳಾಗಲಿವೆ. ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ.
ಕುಂಭ: ಆಹಾರದಲ್ಲಿನ ಬದಲಾವಣೆಯಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ.
ಮೀನ: ವಾಹನ ಚಾಲನೆ ಹಾಗೂ ವಾಹನದಲ್ಲಿ ಪ್ರಯಾಣಿಸುವಾಗ ಹೆಚ್ಚು ಜಾಗೃತರಾಗಿರಿ.
