ನಿತ್ಯ ನೀತಿ : ನೀವು ನಿಮ್ಮ ಗುರಿ ತಲುಪಬೇಕಾದರೆ ಒಂದೇ ಮನಸ್ಥಿತಿಯಿಂದ ನಿರಂತರವಾಗಿ ಪ್ರಯತ್ನಿಸಬೇಕು.
ಪಂಚಾಂಗ : ಮಂಗಳವಾರ , 26-05-2026
ಪರಾಭವ ನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರಗ್ರೀಷ / ಮಾಸ: ಅಧಿಕ /ಜ್ಯೇಷ್ಠ / ಪಕ್ಷ: ಶುಕ್ಲ / ತಿಥಿ: ಏಕಾದಶಿ / ನಕ್ಷತ್ರ:ಹಸ್ತ ಪೂರ್ಣ / ಯೋಗ: ಸಿದ್ಧಿ / ಕರಣ: ವಣಿಜ
ಸೂರ್ಯೋದಯ – ಬೆ.5.54
ಸೂರ್ಯಾಸ್ತ – 06.41
ರಾಹುಕಾಲ – 3.00-4.30
ಯಮಗಂಡ ಕಾಲ – 9.00- 10.30
ಗುಳಿಕ ಕಾಲ – 12.00- 1.30
ರಾಶಿಭವಿಷ್ಯ
ಮೇಷ: ಇತರರೊಂದಿಗೆ ಸೇರಿ ಮಾಡುವ ಕೆಲಸದಲ್ಲಿ ಉತ್ತಮ ಲಾಭ ದೊರೆಯಲಿದೆ. ಯಶಸ್ಸು ಸಾಧಿಸುವಿರಿ.
ವೃಷಭ: ಸರ್ಕಾರಿ ವಲಯದಲ್ಲಿ ಕೆಲಸ ಮಾಡುವವರಿಗೆ ಅತ್ಯುತ್ತಮವಾದ ದಿನ.
ಮಿಥುನ: ವೃತ್ತಿಪರರು ವೃತ್ತಿಜೀವನದಲ್ಲಿ ಸಕಾರಾತಕ ಲಿತಾಂಶ ಪಡೆಯಲು ಗಮನ ಹರಿಸಬೇಕು.
ಕಟಕ: ಕಚೇರಿಯಲ್ಲಿ ಉನ್ನತ ಅಧಿಕಾರಿಯೊಂದಿಗೆ ವಾದ- ವಿವಾದ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.
ಸಿಂಹ: ಹಿಡಿದ ಕೆಲಸ ಗಳನ್ನು ಒಂದೇ ಬಾರಿಗೆ ಪೂರ್ಣಗೊಳಿಸುವುದು ಕಷ್ಟಸಾಧ್ಯವಾಗಲಿದೆ.
ಕನ್ಯಾ: ಕೌಟುಂಬಿಕ ಮತ್ತು ವೈವಾಹಿಕ ಜೀವನವು ಆಹ್ಲಾದಕರವಾಗಿರುತ್ತದೆ.
ತುಲಾ: ಮೇಲಧಿಕಾರಿ ಗಳೊಂದಿಗೆ ಉತ್ತಮ ಸಂಬಂಧ ಬೆಳೆಸುವಲ್ಲಿ ಯಶಸ್ವಿಯಾಗುವಿರಿ.
ವೃಶ್ಚಿಕ: ಕುಟುಂಬ ಸದಸ್ಯರೊಂದಿಗೆ ಜಗಳ ವಾಡುವ ಸಂದರ್ಭ ಎದುರಾಗಬಹುದು.
ಧನುಸ್ಸು: ಸುತ್ತಮುತ್ತಲಿನ ಜನರೊಂದಿಗೆ ಹೆಚ್ಚು ಮಾತನಾಡದಿರುವುದು ಬಹಳ ಒಳ್ಳೆಯದು.
ಮಕರ: ಆರ್ಥಿಕವಾಗಿ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ. ಮುಂಜಾಗ್ರತೆ ವಹಿಸಿ.
ಕುಂಭ: ವ್ಯಾಪಾರಿಗಳು ಅಥವಾ ವೃತ್ತಿಯಲ್ಲಿರುವ ವರು ಅಧಿಕೃತ ಪ್ರಯಾಣ ಕೈಗೊಳ್ಳಬೇಕಾಗುತ್ತದೆ.
ಮೀನ: ನೀವು ಮಾಡುವ ಉತ್ತಮ ಕೆಲಸಗಳಿಗೆ ಸಹೋದ್ಯೋಗಿಗಳ ಬೆಂಬಲ ದೊರೆಯಲಿದೆ.
