ನಿತ್ಯ ನೀತಿ : ನಮ್ಮ ಕೆಲಸದಲ್ಲಿಯ ಕುಶಲತೆ, ವ್ಯವಹಾರದಲ್ಲಿಯ ಸಭ್ಯತೆಗಳು ಮುಖದ ಮೇಲಿನ ಪ್ರಸನ್ನತೆಗೆ ಕಾರಣವಾಗಲಿ..!
ಪಂಚಾಂಗ : ಗುರುವಾರ, 28-05-2026
ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ: ಅಧಿಕ /ಪಕ್ಷ: ಶುಕ್ಲ / ತಿಥಿ: ದ್ವಾದಶಿ / ನಕ್ಷತ್ರ: ಚಿತ್ತ / ಯೋಗ: ವರೀಯಾನ್ / ಕರಣ: ಕೌಲವ
ಸೂರ್ಯೋದಯ – ಬೆ.05.54
ಸೂರ್ಯಾಸ್ತ – ಸಾ.06.42
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳಿಗೆ ಶುಭದಾಯಕ ದಿನ.
ವೃಷಭ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಮಿಥುನ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲಕರ ದಿನ. ಸದೃಢ ಆರೋಗ್ಯದಿಂದ ನೆಮದಿ ಸಿಗಲಿದೆ.
ಕಟಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಣಕಾಸಿನ ತೊಂದರೆ ಎದುರಾಗಲಿದೆ.
ತುಲಾ: ವೈಯಕ್ತಿಕ ವಿಷಯಗಳ ಬಗ್ಗೆ ಗಮನವಿರಲಿ.
ವೃಶ್ಚಿಕ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಧನುಸ್ಸು: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಮಕರ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಕುಂಭ: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮೀನ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
