ನಿತ್ಯ ನೀತಿ : ಬೆಂಕಿಯಿಂದ ಕರ್ಪೂರ ಕರಗಿಹೋಗುವಂತೆ ಪಶ್ಚಾತ್ತಾಪದಿಂದ ಪಾಪಕರ್ಮಗಳು ಕರಗಿಹೋಗುತ್ತವೆ.
ಪಂಚಾಂಗ : ಸೋಮವಾರ, 28-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಕೃಷ್ಣ / ತಿಥಿ: ದ್ವಿತೀಯಾ / ನಕ್ಷತ್ರ: ರೇವತಿ / ಯೋಗ: ಧ್ರುವ / ಕರಣ: ತೈತಿಲ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.14
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದಿರುವುದು ಒಳಿತು.
ವೃಷಭ: ಖಾಸಗಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ನಿರಾಸಕ್ತಿ ಉಂಟಾಗಲಿದೆ.
ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬರಲಿದೆ. ಮಹಿಳೆಯರಿಗೆ ಯಶಸ್ಸು ಸಿಗಲಿದೆ.
ಕಟಕ: ಆರ್ಥಿಕವಾಗಿ ಪ್ರಗತಿ ಸಾಽಸುವಿರಿ. ಸರ್ಕಾರಿ ಕೆಲಸದಲ್ಲಿ ಯಶಸ್ಸು ಸಿಗಲಿದೆ.
ಸಿಂಹ: ಸಿನಿಮಾ ಕ್ಷೇತ್ರದಲ್ಲಿ ರುವವರಿಗೆ ಉತ್ತಮ ಅವಕಾಶಗಳು ದೊರೆಯಲಿವೆ.
ಕನ್ಯಾ: ಸಣ್ಣ ಕೈಗಾರಿಕೆ ವ್ಯಾಪಾರಿಗಳಿಗೆ ಲಾಭ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ.
ತುಲಾ: ನಿದ್ರಾಹೀನತೆ ಕಾಡಬಹುದು. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಒಳಿತು.
ವೃಶ್ಚಿಕ: ಸಾರ್ವಜನಿಕ ಕ್ಷೇತ್ರದಲ್ಲಿ ಜನಪ್ರಿಯತೆ ಗಳಿಸುವಿರಿ. ಆತ್ಮವಿಶ್ವಾಸ ಹೆಚ್ಚಾಗಲಿದೆ.
ಧನುಸ್ಸು: ಹೂವಿನ ವ್ಯಾಪಾರಿಗಳಿಗೆ ಆದಾಯ ವೃದ್ಧಿ ಯಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ.
ಮಕರ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ ಹೆಚ್ಚಾಗಲಿದೆ. ಉತ್ತಮ ದಿನ.
ಕುಂಭ: ಮಕ್ಕಳ ಆರೋಗ್ಯದ ವಿಚಾರದಲ್ಲಿ ಹೆಚ್ಚು ಎಚ್ಚರಿಕೆ ವಹಿಸಿ. ದಿನಾಂತ್ಯದಲ್ಲಿ ಆಯಾಸವಾಗಬಹುದು.
ಮೀನ: ರಾಜಕೀಯ, ಸಿನಿಮಾ ಕ್ಷೇತ್ರದಲ್ಲಿರುವವರು ಉತ್ತಮ ಫಲ ನಿರೀಕ್ಷಿಸಬಹುದು.
