Thursday, December 5, 2024
Homeಜಿಲ್ಲಾ ಸುದ್ದಿಗಳು | District Newsಚಿತ್ರದುರ್ಗ ಬಳಿ ಲಾರಿ-ಕಾರಿನ ನಡುವೆ ಭೀಕರ ಅಪಘಾತ, ನಾಲ್ವರ ಸಾವು

ಚಿತ್ರದುರ್ಗ ಬಳಿ ಲಾರಿ-ಕಾರಿನ ನಡುವೆ ಭೀಕರ ಅಪಘಾತ, ನಾಲ್ವರ ಸಾವು

ಚಿತ್ರದುರ್ಗ,ಜೂ.15-ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಫಘಾತದಲ್ಲಿ ಮಗು ಸೇರಿ ನಾಲ್ವರು ಸಾವನ್ನಪ್ಪಿ ಮೂವರು ಗಂಭಿರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದೆ.

ಮೃತಪಟ್ಟವರನ್ನು ಬೆಂಗಳೂರಿನ ಥಣಿಸಂದ್ರದ ನಿವಾಸಿಗಳಾದ ಪ್ರಜ್ವಲ್‌ ರೆಡ್ಡಿ(30) ಹರ್ಷಿತಾ(28) ನೋಹನ್‌ (2) ಹಾಗೂ ವಿಜಯ ರೆಡ್ಡಿ ಎಂದು ತಿಳಿದು ಬಂದಿದೆ. ಗೋವಾಗೆ ಕಾರಿನಲ್ಲಿ ತೆರಳುತ್ತಿದ್ದಾಗ ಮುಂದೆ ಚಲಿಸುತ್ತಿದ್ದ ಲಾರಿಯ ಟಯರ್‌ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತುಂಬಾ ಅಡ್ಡಾಡಿದಿಡ್ಡಿಯಾಗಿ ಲಾರಿ ಚಲಿಸಿದ್ದು, ಈ ವೇಳೆ ಹಿಂದೆ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿಹೊಡೆದುಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಕಾರಿನಲ್ಲಿ ಆರು ಮಂದಿ ಪ್ರಯಾಣ ಮಾಡುತ್ತಿದ್ದು ಡಿಕ್ಕಿ ಹೊಡೆದ ರಂಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಉಳಿದ ಮೂವರಿಗೆ ಗಂಭಿರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಚಿತ್ರದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸುದ್ದಿ ತಿಳಿದ ಕೂಡಲೇ ಭರಮಸಾಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News