Wednesday, September 11, 2024
Homeಜಿಲ್ಲಾ ಸುದ್ದಿಗಳು | District Newsಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು

ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು

ಗದಗ,ಆ.18- ಸರ್ಕಾರಿ ಬಸ್‌‍ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ಹೊರವಲಯದಲ್ಲಿಂದು ಮುಂಜಾನೆ ಸಂಭವಿಸಿದೆ.ಹಾವೇರಿ ಮೂಲದ ರುದ್ರಪ್ಪ ಅಂಗಡಿ(55) ಪತ್ನಿ ರಾಜೇಶ್ವರಿ(45) ಪುತ್ರಿ ಐಶ್ವರ್ಯ(16) ಹಾಗೂ ಪುತ್ರ ವಿಜಯ್‌ (12) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಶ್ರಾವಣ ಮಾಸದ ಪ್ರಯುಕ್ತ ಇವರು ಕಾರಿನಲ್ಲಿ ಕಲ್ಲಾಪುರದ ಬಸವೇಶ್ವರ ದೇವಾಲಯಕ್ಕೆ ಹೊರಟಿದ್ದರು. ಈ ವೇಳೆ ಇಳಕಲ್‌ನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್‌‍ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

ಸುದ್ದಿ ತಿಳಿದ ನರಗುಂದ ಠಾಣೆ ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತದೇಹಗಳನ್ನು ಹರಸಾಹಸಪಟ್ಟು ಹೊರತೆಗೆಯಲಾಯಿತು.ಈ ಸಂಬಂಧ ನರಗುಂದ ಠಾಣೆ ಪೊಲೀಸರು ಪ್ರಕರಣ ದಾಖಲಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ.

ಆಕ್ರಂಧನ:
ಕುಟುಂಬ ಸದಸ್ಯರನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿತ್ತು. ಅದರಲ್ಲೂ ದೇವಾಲಯಕ್ಕೆ ತೆರಳುತ್ತಿದ್ದ ಕುಟುಂಬ ಈ ರೀತಿ ಸಾವನ್ನಪ್ಪಿರುವುದರಿಂದ ಇಡೀ ಗ್ರಾಮವನ್ನು ಮೊಮಲ ಮರುಗಿದೆ.

RELATED ARTICLES

Latest News