ಹೊಸಕೋಟೆ,ಡಿ.9- ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಮೂಲ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಶರತ್ ಬಚ್ಚೇಗೌಡರ ಕಾರ್ಯವೈಖರಿ ಕುರಿತು ತೀವ್ರ ಆಕ್ಷೇಪಗಳು ವ್ಯಕ್ತವಾಗಿವೆ.
ಸಭೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚೀಮಡಂಹಳ್ಳಿ ಮುನಿಶಾಮಯ್ಯ ಅವರನ್ನು ಕಾರ್ಯಕರ್ತರು ತೀವ್ರ ತರಾಟೆಗೆ ತೆಗೆದುಕೊಂಡು, ಶಾಸಕರು ನಮ್ಮನ್ನು ಕಡೆಗಣಿಸಲು ನೀವೇ ಕಾರಣ. ಸ್ಥಾನಮಾನಗಳನ್ನು ನೀಡುವಾಗ ಮೂಲ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ನೀಡಿದಾಗ ಮೂಲ ಕಾಂಗ್ರೆಸ್ಸಿಗರ ನಡುವೆ ಸಮನ್ವಯ ಸಮಿತಿ ರಚನೆ ಮಾಡಬೇಕಿತ್ತು. ಆದರೆ, ನಿಮ್ಮ ಸ್ವಾರ್ಥಕ್ಕಾಗಿ ಕಾರ್ಯಕರ್ತರ ಅಸ್ತಿತ್ವವನ್ನು ಬಲಿಕೊಡುವ ಕೆಲಸ ಮಾಡಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡರು.
ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಬ್ರೇಕ್, ಕಟೀಲ್ ಮುಂದುವರಿಕೆ
ಜಿಪಂ ಮಾಜಿ ಅಧ್ಯಕ್ಷ ವಿ.ಪ್ರಸಾದ್ ಮಾತನಾಡಿ, ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿ ಹೋದ ಸಂದರ್ಭದಲ್ಲಿ ನಡೆದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ ಶರತ್ ಬಚ್ಚೇಗೌಡರು, ಕ್ಷೇತ್ರದಲ್ಲಿ ಸಚಿವ ಎಂಟಿಬಿ ನಾಗರಾಜ್ ಅವರ ನಡುವೆ ಶಾಸಕರಾಗಿ ಹಿಡಿತ ಸಾಧಿಸಲಾಗದ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಈಗ ಕ್ಷೇತ್ರದಲ್ಲಿ ಮೂಲ ಕಾಂಗ್ರೆಸ್‍ನವರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು.
ಯಾವುದೇ ಕಾರ್ಯಕ್ರಮಗಳಿಗೂ ಮೂಲ ಕಾಂಗ್ರೆಸಿಗರಿಗೆ ಆಹ್ವಾನ ನೀಡುತ್ತಿಲ್ಲ. ಹಿಂದಿನಂತೆ ಪಾಳೇಗಾರಿಕೆ ವರ್ತನೆ ಈಗಿನ ಸಂದರ್ಭದಲ್ಲಿ ನಡೆಯುವುದಿಲ್ಲ. ಸಾಮೂಹಿಕ ನಾಯಕತ್ವಕ್ಕೆ ಮಾತ್ರ ಯಶಸ್ಸು ಸಾಧ್ಯ. ಮೂಲ ಕಾಂಗ್ರೆಸಿಗರ ಕಡೆಗಣನೆ ಮುಂದು ವರೆದರೆ ಕ್ಷೇತ್ರದ ಹಿರಿಯ ನಾಯಕರು ಕೈ ಕಟ್ಟಿ ಕೂರಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೇಮಂತ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಕೊಟ್ಟಿರುವ ಶಾಸಕ ಶರತ್ ಅವರು ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡುವಾಗ ಯಾವೊಬ್ಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಗಣನೆಗೆ ತೆಗೆದಕೊಳ್ಳುತ್ತಿಲ್ಲ. ಸಭೆ ಸಮಾರಂಭಗಳಿಗೆ ಆಹ್ವಾನ ನೀಡುತ್ತಿಲ್ಲ. ಫ್ಲಕ್ಸ್‍ಗಳಲ್ಲಿ ಕೇವಲ ನಿಮ್ಮದೆ ಬೆಂಬಲಿಗರ ಪೋಟೋ ಹಾಕಿಕೊಳ್ತಾರೆ. ಮೂಲ ಕಾಂಗ್ರೆಸ್ಸಿಗರು ಬೇಡ ಎಂಬಂತೆ ವರ್ತಿಸುತ್ತಿದ್ದಾರೆ. ಇದು ಸರಿ ಹೋಗದಿದ್ದರೆ ನಾವು ನಮ್ಮ ದಾರಿ ನೋಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಹಾರಾಷ್ಟ್ರ ಬ್ಯಾಂಕ್ ಮುತ್ತಿಗೆಗೆ ಯತ್ನಿಸಿದ ಕನ್ನಡಪರ ಹೋರಾಟಗಾರರು
ಯಲಚಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡ ನಿಸಾರ್ ಮಾತನಾಡಿ, ನಾನು ಹಲವಾರು ವರ್ಷಗಳಿಂದ ಪಕ್ಷದ ಏಳಿಗೆಗೆ ದುಡಿಯುತ್ತಿದ್ದೇನೆ. ಆದರೆ, ಗ್ರಾಪಂ ಚುನಾವಣೆ ವೇಳೆ ನನಗೆ ಸ್ಪರ್ಧೆ ಮಾಡಲು ಅವಕಾಶ ನೀಡದೆ ಶಾಸಕರು ತಮ್ಮ ಬೆಂಬಲಿಗರನ್ನು ನಿಲ್ಲಿಸಿ ಗೆಲ್ಲಿಸಿಕೊಂಡಿದ್ದಾರೆ. ಮೂಲ ಕಾಂಗ್ರೆಸ್ಸಿಗನಾದ ನನ್ನನ್ನು ಸಂಪೂರ್ಣವಾಗಿ ಕಡಗಣಿಸಲಾಗಿದೆ ಎಂದು ಕಣ್ಣೀರಿಟ್ಟರು.
ಸಭೆಯಲ್ಲಿ ಸ್ಥಳೀಯ ಮುಖಂಡರಾದ ಚಿಕ್ಕಹುಲ್ಲೂರು ಬಚ್ಚೇಗೌಡ, ಸಗೀರ್ ಅಹಮದ್, ಮಂಜುನಾಥ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
Hoskote Congress, MLA Sarath Bachegowda,