ಮನೆಗಳ್ಳನ ಬಂಧನ : 18 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ವಶ

Social Share

ಬೆಂಗಳೂರು, ಫೆ.9- ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ 18 ಲಕ್ಷ ಮೌಲ್ಯದ 300 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ.

ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಿವಾಸಿ ರಮೇಶ(53) ಬಂಧಿತ ಆರೋಪಿ. ಈತನಿಂದ 300 ಗ್ರಾಂ ತೂಕದ ವಿವಿಧ ಚಿನ್ನದ ವಡವೆಗಳು ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕಾಶ್ ಎಂಬುವವರ ಮನೆ ಇದೆ.

ಫೆ.5ರಂದು ಬೆಳಗ್ಗೆ 8.30ರಿಂದ ರಾತ್ರಿ 9.20ರ ನಡುವಿನ ಸಮಯದಲ್ಲಿ ಕಳ್ಳ ಇವರ ಮನೆಗೆ ನುಗ್ಗಿ ಸುಮಾರು 250ರಿಂದ 300 ಗ್ರಾಂ ಚಿನ್ನಾಭರಣ ಹಾಗೂ 40 ಸಾವಿರ ಹಣ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ಅವರು ದೂರು ನೀಡಿದ್ದರು.

ಬೆಂಗಳೂರಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ 11 ಮೇಲ್ಸೇತುವೆ ನಿರ್ಮಾ

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆಹಾಕಿ ಆರೋಪಿಯೊಬ್ಬನನ್ನು ಬಂಧಿಸಿ ವಿಚಾರಣೆಗೊಳಪಡಿಸಿ 18 ಲಕ್ಷ ರೂ. ಮೌಲ್ಯದ 300 ಗ್ರಾಂ ತೂಕದ ವಿವಿಧ ರೀತಿಯ ಚಿನ್ನದ ವಡವೆಗಳು ಹಾಗೂ 11 ಸಾವಿರ ಹಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

1.34 ಕೋಟಿ ಮೌಲ್ಯದ ಡ್ರಗ್ ವಶ, 11 ಮಂದಿ ಬಂಧನ

ದಕ್ಷಿಣ ವಿಭಾಗದ ಉಪಪೊಲೀಸ್ ಆಯುಕ್ತ ಕೃಷ್ಣಕಾಂತ್ ಅವರ ಮಾರ್ಗದರ್ಶನದಲ್ಲಿ ಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಮಂಜುನಾಥ್ ಅವರನ್ನೊಳಗೊಂಡ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ತಂಡದ ಉತ್ತಮ ಕಾರ್ಯವನ್ನು ಮೇಲಾಧಿಕಾರಿಗಳು ಪ್ರಶಂಶಿಸಿರುತ್ತಾರೆ.

House, burglar, arrested ,18 lakhs gold, jewellery,

Articles You Might Like

Share This Article