Home ಇದೀಗ ಬಂದ ಸುದ್ದಿ ಮಳೆಗೆ ಮನೆ ಕುಸಿತ : ಪ್ರಾಣಾಪಾಯದಿಂದ ಪಾರಾದ ಕುಟುಂಬ

ಮಳೆಗೆ ಮನೆ ಕುಸಿತ : ಪ್ರಾಣಾಪಾಯದಿಂದ ಪಾರಾದ ಕುಟುಂಬ

0
ಮಳೆಗೆ ಮನೆ ಕುಸಿತ : ಪ್ರಾಣಾಪಾಯದಿಂದ ಪಾರಾದ ಕುಟುಂಬ
House collapse due to rain: Family saved from danger

ನಂಜನಗೂಡು, ಅ.14- ಕಳೆದ 7 ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮನೆ ಗೋಡೆ ಮೇಲ್ಛಾವಣಿ ಕುಸಿದು ಬಿದ್ದಿರುವ ಘಟನೆ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ 7 ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೊಸಹಳ್ಳಿ ಗ್ರಾಮದ ಮಲ್ಲಿಗಮ್ಮ ಎಂಬುವರಿಗೆ ಸೇರಿದ ವಾಸದ ಮನೆ ಕುಸಿದುಬಿದ್ದಿದೆ. ಮನೆ ಮಂದಿ ಮಲಗಿದ್ದ ಭಾಗ ಹೊರತುಪಡಿಸಿ ಉಳಿದ ಭಾಗ ಕುಸಿದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಿಥಿಲಗೊಂಡ ಮನೆ ಸರಿಪಡಿಸುವಂತೆ ಕಳೆದ ವರ್ಷದ ಪ್ರವಾಹದ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ಮತ್ತು ರೆವಿನ್ಯೂ ಅಧಿಕಾರಿ ಗಮನಕ್ಕೆ ತರಲಾಗಿತ್ತು. ದೇವಿರಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೂ ಕೂಡ ಮನವಿ ಪತ್ರ ನೀಡಲಾಗಿದೆ. ಕಳೆದ ವರ್ಷ ಪರಿಹಾರ ನೀಡುವುದಾಗಿ ತಿಳಿಸಿ ಭಾವಚಿತ್ರ ತೆಗೆದುಕೊಂಡು ಹೋದ ಕಂದಾಯ ಅಧಿಕಾರಿಗಳು ಪರಿಹಾರವೂ ಇಲ್ಲ ವಾಸದ ಮನೆಯ ಸೌಲಭ್ಯವನ್ನು ಕೂಡ ನೀಡಿಲ್ಲ.

ಜೀವ ಹಾನಿ ಆಗಿದ್ದರೆ ಯಾರು ಹೊಣೆ ಎಂದು ಹೊಸಹಳ್ಳಿ ಗ್ರಾಮಸ್ಥರು ಮತ್ತು ಮನೆ ಕಳೆದುಕೊಂಡ ಕುಟುಂಬಸ್ಥರು ಕಂದಾಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಶಾಸಕರು ಮತ್ತು ತಾಲೂಕು ಆಡಳಿತ ಎಚ್ಚೆತ್ತುಕೊಂಡು ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವ ಬಡ ರೈತ ಕುಟುಂಬಕ್ಕೆ ಆಸರೆಯಾಗಬೇಕಿದೆ..