Wednesday, January 8, 2025
Homeರಾಜ್ಯಹುಬ್ಬಳ್ಳಿ ಸಿಲಿಂಡರ್‌ ಸ್ಫೋಟ : ಮತ್ತೊಬ್ಬರು ಮಾಲಾಧಾರಿ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್‌ ಸ್ಫೋಟ : ಮತ್ತೊಬ್ಬರು ಮಾಲಾಧಾರಿ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ

Hubballi cylinder explosion: Another devotee dies, death toll rises to 8

ಹುಬ್ಬಳ್ಳಿ,ಡಿ.31-ಇಲ್ಲಿನ ಅಚ್ಚವನ ಕಾಲೊನಿಯ ಶಿವ ದೇವಾಲಯದಲ್ಲಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಿಂದ ಸಂಭವಿಸಿದ ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆಎಂಟಕ್ಕೇರಿದೆ.

ಸತತ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಪ್ರಕಾಶ ಬಾರಕೇರ (42) ಮೃತಪಟ್ಟಿದ್ದಾರೆ. ಕಳೆದ ಡಿ.23 ಸಂಭವಿಸಿದ ದುರಂತದಲ್ಲಿ ಒಂಬತ್ತು ಮಂದಿ ಮಾಲಾಧಾರಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸರಣಿಯಂತೆ ಎಂಟು ಮಂದಿ ಕೊನೆಯುಸಿರೆಳೆದಿದ್ದಾರೆ.

ಡಿ.23ರಿಂದ 31 ರ ನಡುವೆ, ನಿಜಲಿಂಗಪ್ಪ ಬೇಪುರಿ, ಸಂಜಯ್‌ ಸವದತ್ತಿ, ರಾಜು ಮುಗೇರಿ, ಲಿಂಗರಾಜ್‌ ಬಿರನೂರು, ಮಂಜುನಾಥ ವಾಗ್ಮೋಡೆ, ಶಂಕರ್‌ ಚಹ್ವಾಣ್‌‍, ತೇಜಸ್ವಿ ಸಾತ್ರೆ, ಪ್ರಕಾಶ್‌ ಬಾರಕೇರ ಸಾವನ್ನಪ್ಪಿದ್ದು, ಕಿಮ್ಸೌ ಆಸ್ಪತ್ರೆಯಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

25% ಗಾಯಗೊಂಡಿದ್ದ 12 ವರ್ಷ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರ ಬದುಕಿಳಿದ್ದು, ಕೆಲ ದಿನದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ತೀವ್ರ ಗಾಯದಿಂದ ಎಲ್ಲಾ ಮಾಲಾಧಾರಿಗಳನ್ನು ಕಿಮ್ಸೌಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಿಲ್ಲಾಡಳಿತ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಪರಿಣಾಮ, ಬೆಂಗಳೂರಿನ ನುರಿತ ವೈದ್ಯರು ಮತ್ತು ಕಿಮ್ಸೌನಿರ್ದೇಶಕ ಎಸ್‌‍.ಎಫ್‌ ಕಮಾರ ನೇತೃತ್ವದ ಜೀವ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

RELATED ARTICLES

Latest News