ಹುಬ್ಬಳ್ಳಿ, ಆ.22- ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಶವ ತರಲು ಕ್ರೂಸರ್ನಲ್ಲಿ ಹೊರಟ್ಟಿದ್ದವರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಘಟಗಿಯ ರಾಮನಾಳ ಕ್ರಾಸ್ ಬಳಿ ನಡೆದಿದೆ.
ಹಳಿಯಾಳ ತಾಲ್ಲೂಕಿನ ನಂದಿಘಟ್ಟ ಗ್ರಾಮದ ಶಿವನಗೌಡ ಪಾಟೀಲ್, ಅಮೃತಪಾಟೀಲ್ ಮೃತಪಟ್ಟಿದ್ದು, ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ. ಇವರು ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಶವ ತರಲು ಕ್ರೂಸರ್ನಲ್ಲಿ ತೆರಳುತ್ತಿದ್ದಾಗ. ಎದುರಿಗೆ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಕಲಘಟಗಿ ಠಾಣೆ ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.