ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿಗೆ ಒಪ್ಪಿಗೆ

ಬೆಂಗಳೂರು,ಡಿ.10- ಹುಬ್ಬಳ್ಳಿ-ಸೊvಪುರ ಚತುಷ್ಪಥ ರಸ್ತೆ ನಿರ್ಮಾಣ ಪ್ರಸ್ತಾವನೆಗೆ ಆರ್ಥಿಕ ಪ್ರಾಮುಖ್ಯತೆ ಹಾಗೂ ಅಂತರ್ ರಾಜ್ಯಗಳ ಸಂಪರ್ಕ ಯೋಜನೆಯಡಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ತಿಳಿಸಿದ್ದಾರೆ.

ನಗರದಲ್ಲಿಂದು ಕೇಂದ್ರ ಭೂ ಸಾರಿಗೆ ಸಚಿವರು ನಡೆಸಿದ ಸಭೆಯಲ್ಲಿ ಹುಬ್ಬಳ್ಳಿ- ಸೊಲ್ಲಾಪುರ ಮಾರ್ಗದಲ್ಲಿ ವಾಹನಗಳ ಸಂಚಾರ ಅಧಿಕ ಪ್ರಮಾಣದಲ್ಲಿದ್ದು, ಈ ಮಾರ್ಗವನ್ನು ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಿದರೆ ಸುಗಮ ಸಂಚಾರ ಹಾಗೂ ಅಂತರ್ ರಾಜ್ಯ ಸಂಪರ್ಕಕ್ಕೆ ಅನುಕೂಲ ವಾಗುತ್ತದೆ.

ಈ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಗೆ ಮೇಲ್ದರ್ಜೆಗೇರಿಸುವ ಪ್ರಾಮುಖ್ಯತೆ ಬಗ್ಗೆ ಮನವರಿಕೆ ಮಾಡಿಕೊಟ್ಟ ಕೂಡಲೇ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿ ಈ ಹೆದ್ದಾರಿ ಕಾಮಗಾರಿ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರೆಂದು ಕಾರಜೋಳ ತಿಳಿಸಿದರು.