ಬೆಂಗಳೂರು, ಫೆ.17- ಮಾನವ- ವನ್ಯಪ್ರಾಣಿ ಸಂಘರ್ಷದಿಂದ ಸಂಭವಿಸುವ ಮಾನವ ಪ್ರಾಣ ಹಾನಿಗೆ ನೀಡುವ ಪರಿಹಾರವನ್ನು 7.50 ಲಕ್ಷ ರೂ. ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಬೆಳೆಹಾನಿ ಪ್ರಕರಣಗಳಲ್ಲಿ ನೀಡುತ್ತಿರುವ ಪರಿಹಾರ ಧನವನ್ನೂ ದ್ವಿಗುಣಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‍ನಲ್ಲಿ ತಿಳಿಸಿದರು.
ಮಾನವ- ಪ್ರಾಣಿ ಸಂಘರ್ಷವನ್ನು ನಿಯಂತ್ರಿಸಲು, ಸಂಘರ್ಷ ಕ್ಷೇತ್ರದಿಂದ ಸೆರೆಹಿಡಿಯಲ್ಪಟ್ಟ ವನ್ಯ ಪ್ರಾಣಿಗಳನ್ನು, ಅವುಗಳ ನೈಸರ್ಗಿಕ ಆವಾಸ ಸ್ಥಾನ ಪ್ರದೇಶಗಳನ್ನು ಗುರುತಿಸಿ ಬಿಡುಗಡೆ ಮಾಡಲು ಭದ್ರಾ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನ ವನಗಳಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಬೆಂಗಳೂರು ನಗರಕ್ಕೆ 10 ಸಾವಿರ ಕೋಟಿ ರೂ. ಬಂಪರ್ ಕೊಡುಗೆ
ಕಾಡಾನೆ ಕಾರ್ಯಪಡೆ:
ಕಾಡಾನೆ ಹಾವಳಿ ತಡೆಗಟ್ಟಲು ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಕಾರ್ಯಪಡೆಯನ್ನು ರಚಿಸಲಾಗಿದೆ. ಇದೇ ಮಾದರಿಯಲ್ಲಿ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚಿರತೆ ದಾಳಿ ತಡೆಯಲು ಸಹ ಕಾರ್ಯಪಡೆಯನ್ನು ರಚಿಸಲಾಗಿದೆ. ಈ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹೆಚ್ಚುವರಿಯಾಗಿ 199 ಸಿಬ್ಬಂದಿಗಳನ್ನು ನೇಮಿಸಲು ಅನುಮೋದನೆ ನೀಡಲಾಗಿದೆ.
ಜನನಿಬಿಡ ಪ್ರದೇಶಗಳಲ್ಲಿ 250 ಶೀ ಟಾಯ್ಲೆಟ್‍ಗಳ ನಿರ್ಮಾಣ
ಸೌರಶಕ್ತಿ ಬೇಲಿ ನಿರ್ಮಾಣ:
ಮಾನವ- ಆನೆ ಸಂಘರ್ಷವನ್ನು ಪರಿಣಾಮಕಾರಿಯಾಗಿ ತಡೆಯುವ ಸಲುವಾಗಿ 72 ಕಿ.ಮೀ. ರೈಲ್ವೆ ಬ್ಯಾರಿಕೇಡ್, 36 ಕಿ.ಮೀ. ಆನೆ ನಿರೋಧಕ ಕಂದಕ, 186 ಕಿ.ಮೀ. ಸೌರಶಕ್ತಿ ಬೇಲಿ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ.
2022-23ನೇ ಸಾಲಿನಲ್ಲಿ ಈ ಕಾಮಗಾರಿಗಳಿಗೆ 150 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ ಎಂದು ಅವರು ಹೇಳಿದರು.
human-wildlife, conflict, BasavarajBommai, Budget2023,