Friday, May 17, 2024
Homeರಾಜ್ಯಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್‍ಗೆ ವೀರತರ್ಪಣ

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್‍ಗೆ ವೀರತರ್ಪಣ

ಆನೇಕಲ್. ನ. 25 – ಜಮ್ಮು – ಕಾಶ್ಮೀರದ ರಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕರ್ನಾಟಕದ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ಅಂತ್ಯಕ್ರಿಯೆ ಇಂದು ಸಕಲ ಸೇನಾ ಗೌರವದೊಂದಿಗೆ ನೆರವೇರಿತು.

ಯೋಧ ಕ್ಯಾಪ್ಟನ್ ಪ್ರಾಂಜಲ್‍ರವರ ಪಾರ್ಥಿವ ಶರೀರವನ್ನು ಜಿಗಣಿ ಸಮೀಪವಿರುವ ನಂದನವನ ಬಡಾವಣೆಯ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ನೂರಾರು ಮಂದಿ ದೇಶಭಕ್ತರು ಅಮರ್ ರಹೆ… ಅಮರ್ ರಹೆ ಫ್ರಾಂಜಲ್… ಅಮರ್ ರಹೆ ಎಂದು ಹೇಳುತ್ತಾ ಕ್ಯಾಪ್ಟನ್ ಪ್ರಾಂಜಲ್‍ಗೆ ಅಂತಿಮ ನಮನ ಸಲ್ಲಿಸಿದರು.

ನಂದನವನ ಬಡಾವಣೆಯಿಂದ ಸೇನಾ ವಾಹನದಲ್ಲಿ ಅಂತಿಮ ಯಾತ್ರೆ ಸುಮಾರು 25 ಕಿ.ಮೀ.
ಆನೇಕಲ್ ತಹಶೀಲ್ದಾರ್ ಅಕಾರಿಗಳಿಂದ ಪ್ರಾಂಜಲ್ ಕುಟುಂಬದ ಸದಸ್ಯರಿಗೆ ದೈರ್ಯ ತುಂಬುವ ಕೆಲಸವನ್ನು ಮಾಡಿದರು ಜೊತೆಗೆ ಅಂತಿಮ ದರ್ಶನಕ್ಕೆ ಯಾವುದೇ ತೊಂದರೆ ಯಾಗದಂತೆ ತಾಲ್ಲೂಕು ಆಡಳಿತ ಎಲ್ಲಾ ರೀತಿಯಾದ ಸಿದ್ದತೆಗಳನ್ನು ಮಾಡಲಾಗಿತ್ತು.ಇಂದು ಬೆಳಗ್ಗೆ 11 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಗಣ್ಯರಿಂದ ಅಂತಿಮ ದರ್ಶನ:
ನಿನ್ನೆ ರಾತ್ರಿ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಅವರ ಪ್ರಾರ್ಥೀವ ಶರೀರವನ್ನು ತರಲಾಯಿತು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ. ಜಾರ್ಜ್, ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಮತ್ತಿತರರು ಗೌರವ ನಮನ ಸಲ್ಲಿಸಿದರು.

ಇಂದು ಬೆಳಗ್ಗೆ ಸಂಸದ ಡಿ.ಕೆ. ಸುರೇಶ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

RELATED ARTICLES

Latest News