Sunday, May 12, 2024
Homeರಾಷ್ಟ್ರೀಯದೆಹಲಿಯಲ್ಲಿ ಬೈಕ್‍ನಲ್ಲಿ ಬಂದ ವ್ಯಕ್ತಿಗಳಿಂದ ಹಂಗೇರಿ ಪ್ರಜೆಯ ದರೋಡೆ

ದೆಹಲಿಯಲ್ಲಿ ಬೈಕ್‍ನಲ್ಲಿ ಬಂದ ವ್ಯಕ್ತಿಗಳಿಂದ ಹಂಗೇರಿ ಪ್ರಜೆಯ ದರೋಡೆ

ನವದೆಹಲಿ, ಅ.9 (ಪಿಟಿಐ) ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 57 ವರ್ಷದ ಹಂಗೇರಿಯನ್ ಪ್ರಜೆಯೊಬ್ಬನನ್ನು ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಹಿಳೆ ಹುಮಾಯೂನ್ ಸಮಾಧಿಯಿಂದ ಹಂಗೇರಿ ರಾಯಭಾರ ಕಚೇರಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ದಯಾಳ್ ಸಿಂಗ್ ಕಾಲೇಜು ಬಳಿ ಆಟೋರಿಕ್ಷಾ ತಲುಪುತ್ತಿದ್ದಂತೆಯೇ ಹಿಂದಿನಿಂದ ಮೋಟಾರ್‍ಸೈಕಲ್‍ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಮಹಿಳೆಯ ಮೊಬೈಲ್ ಫೋನ್, 12,000 ರೂಪಾಯಿ ನಗದು ಮತ್ತು ಬ್ಯಾಂಕ್ ಕಾರ್ಡ್‍ಗಳನ್ನು ದೋಚಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಮಾಸ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ 10 ನೇಪಾಳಿಗರು

ಮೋಟಾರು ಸೈಕಲ್ ನ ನೋಂದಣಿ ಸಂಖ್ಯೆಯನ್ನು ಮಹಿಳೆ ನೋಟ್ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಘಟನೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಿದ ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 356 (ಕಳ್ಳತನ ಮಾಡುವ ಪ್ರಯತ್ನದಲ್ಲಿ ಹಲ್ಲೇ ಅಥವಾ ಕ್ರಿಮಿನಲ್ ಬಲ) ಮತ್ತು 379 (ಕಳ್ಳತನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಅಪರಾಧಿಗಳನ್ನು ಬಂಧಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News