ಎರಡು ತಿಂಗಳಲ್ಲಿ ಹುಣಸೂರು ಆಸ್ಪತ್ರೆ ಉದ್ಘಾಟನೆ: ಸಚಿವ ಸುಧಾಕರ್

Social Share

ಬೆಳಗಾವಿ,ಡಿ.29-ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನೂರು ಹಾಸಿಗೆಗಳ ಸಾಮಥ್ರ್ಯದ ಸಾರ್ವಜನಿಕ ಆಸ್ಪತ್ರೆ ಇನ್ನೇಡು ತಿಂಗಳೊಳಗೆ ಸಿದ್ಧವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು.

ಶಾಸಕ ಮಂಜುನಾಥ್ ಎಚ್.ಪಿ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಆಸ್ಪತ್ರೆ ಹಿಂದೆಯೇ ಉದ್ಘಾಟನೆಗೊಳ್ಳಬೇಕಿತ್ತು. ಆದರೆ, ಹೆಚ್ಚುವರಿ ಕಾಮಗಾರಿ ನಡೆಸುತ್ತಿರುವ ಕಾರಣ ವಿಳಂಬವಾಗಿದೆ. 9.95ಕೋಟಿ ಪರಿಷ್ಕøತ ಅಂದಾಜು ಮೊತ್ತದ ಅನುಮೋದನೆ ನೀಡುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಅಲ್ಲಿಂದ ಅನುಮತಿ ಸಿಕ್ಕರೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವುದಾಗಿ ತಿಳಿಸಿದರು.

ರಮೇಶ್ ಜಾರಕಿಹೊಳಿಗೆ ಶೀಘ್ರ ಸಚಿವ ಸ್ಥಾನ..

ಈ ಮೊದಲು 12-12-2018ರಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿತ್ತು. ಆರ್‍ಐಡಿಎಫ್ ನಬಾರ್ಡ್ 23 ಯೋಜನೆಯಡಿ 25 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿತ್ತು. ಅರುಣಾ ಕನ್ಸ್‍ಟ್ರಕ್ಷನ್ ಪ್ರವೈಟ್ ಲಿಮಿಟೆಡ್ ಇವರಿಗೆ ಟೆಂಡರ್ ನೀಡಾಗಿದ್ದು, 18 ತಿಂಗಳು ಕಾಲಾವಧಿಯೊಳಗೆ ಕಾಮಗಾರಿ ಮುಗಿಸಲು ಸೂಚಿಸಲಾಗಿತ್ತು. ಆದರೆ, ಮಳೆಗಾಳ ಬಂದ ಕಾರಣ ವಿಳಂಬವಾಗಿದೆ. ಪುನಃ ಇದರ ಕಾಗಮಾರಿ ಪರಿಷ್ಕರಿಸಿ 31.15 ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ನೆಲಮಹಡಿ , ಮೊದಲನೆ ಮಹಡಿ, ಎರಡನೇ ಮಹಡಿ, ಛಾವಣಿ, ವಿದ್ಯುತ್ ಲೈನ್, ಸ್ಯಾನಿಟರಿ, ನೀರು ಸರಬರಾಜು ಪೂರ್ಣಗೊಂಡಿದೆ. ಎಡನೇ ಮಹಡಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಆಸ್ಪತ್ರೆಗೆ ಒಟ್ಟು 94 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಒಂದು ವೇಳೆ ಸಿಬ್ಬಂದಿ ಕೊರತೆ ಇದ್ದರೆ ಹೊರ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲು ಡಿಸಿಗೆ ಅಧಿಕಾರ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‍ನ ಹಿರಿಯ ಸದಸ್ಯ ಆರ್.ವಿ.ದೇಶಪಾಂಡೆ ಅವರು, ಉತ್ತರ ಕನ್ನಡ ಜಿಲ್ಲೆಗೆ ನೀರು ಘೋಷಣೆ ಮಾಡಿದಂತೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.

ಕನ್ಯೆ ಹುಡುಕಾಟದಲ್ಲಿ ರಾಹುಲ್‍ ಗಾಂಧಿ, ಮನದನ್ನೆ ಹೇಗಿರಬೇಕಂತೆ ಗೊತ್ತಾ..?

ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್, ಈಗಾಗಲೇ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವಂತೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಶೀಘ್ರದಲ್ಲೇ ಅಧಿಕೃತ ಆದೇಶ ಹೊರಿಡುಸುವುದಾಗಿ ಭರವಸೆ ಕೊಟ್ಟರು.

Hunsur hospital, inaugurated, two months, Minister Sudhakar,

Articles You Might Like

Share This Article