ನವದೆಹಲಿ,ಫೆ.14- ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಎದುರಾಳಿಗಳೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೈಗೊಂಡಿರುವ ಜನಪರ ನಿಲುಗಳಿದಾಂಗಿ ದೇಶವಾಸಿಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಜೈ ಎನ್ನಲ್ಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಸದ್ಯ ಬಿಜೆಪಿ ಸರ್ಕಾರಕ್ಕೆ ಅಕೃತ ವಿರೋಧ ಪಕ್ಷವೇ ಇಲ್ಲ. 2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷದ ಬಗ್ಗೆ ದೇಶದ ಜನರು ನಿರ್ಧರಿಸುತ್ತಾರೆ ಎಂದು ಅವರು ಪ್ರತಿಪಕ್ಷಗಳ ಕಾಲೇಳೆದಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಪ್ರಚಾರ ಮಾಡದೇ ಇರಬಹುದು ಆದರೆ ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ಚುನಾವಣೆಗಳ ಫಲಿತಾಂಶಗಳು ಒಂದು ಕಾಲದಲ್ಲಿ ಪ್ರಾಬಲ್ಯ ಹೊಂದಿರುವ ರಾಜ್ಯಗಳಲ್ಲಿ ವಿರೋಧ ಪಕ್ಷದ ಬಲವನ್ನು ತೋರಿಸುತ್ತವೆ ಎಂದು ಹೇಳಿದರು.
#2024LoksabhaElection, #NoCompetition, AmitShah, #LokSabhaPolls,