ನಾನೇನೂ ತಪ್ಪು ಮಾಡಿಲ್ಲ, ಏಕೆ ಹೆದರಬೇಕು..? : ಸಿಎಂ ಸಿದ್ದರಾಮಯ್ಯ

ಮೈಸೂರು ,ಆ.2- ಮುಡಾ ನಿವೇಶನ ಹಂಚಿಕೆಯಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ರಾಜ್ಯಪಾಲರ ನೋಟಿಸ್‌‍ಗೆ ಏಕೆ ಹೆದರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರ, ಬಿಜೆಪಿ-ಜೆಡಿಎಸ್‌‍ನ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.ಮುಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ. ಆದರೂ ಶೋಕಾಸ್‌‍ ನೋಟಿಸ್‌‍ ನೀಡುವ ಮೂಲಕ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ ಎಂದು ಸಿದ್ಧರಾಮಯ್ಯ ಕಿಡಿಕಾರಿದರು. ರಾಜ್ಯಪಾಲರು ನೋಟಿಸ್‌‍ ನೀಡಿದ ತಕ್ಷಣ ಸಿದ್ದರಾಮಯ್ಯ ಹೆದರಿದ್ದಾರೆ ಎಂದು ವಿಧಾನಸಭೆಯ … Continue reading ನಾನೇನೂ ತಪ್ಪು ಮಾಡಿಲ್ಲ, ಏಕೆ ಹೆದರಬೇಕು..? : ಸಿಎಂ ಸಿದ್ದರಾಮಯ್ಯ