ಬೆಂಗಳೂರು, ಜು.15-ರೌಡಿ ಬಿಕ್ಲು ಶಿವ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ. ಏಕಾಏಕಿ ನನ್ನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾರೇ ದೂರು ಕೊಟ್ಟರೂ ಎಫ್‌ಐಆರ್ ದಾಖಲಿಸಬಹುದಾ? ದಾಖಲಿಸುವುದಕ್ಕೂ ಮುನ್ನ ನನ್ನಿಂದ ಮಾಹಿತಿ ಪಡೆದಿದ್ದಾರಾ?ಎಂದು ಪ್ರಶ್ನಿಸಿದ್ದಾರೆ.
ಈ ವಿಚಾರದಲ್ಲಿ ನನ್ನ ಹೆಸರು ತಂದಿದ್ದಕ್ಕೆ ಬೇಸರವಾಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶ ಇರಬಹುದು. ನಾನುಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಪೊಲೀಸರು ವಿವಾರಣೆ ಮಾಡದೇ ಪ್ರಕರಣ ದಾಖಲಿಸಿದ್ದಾರೆ.ಇದರ ಹಿಂದಿ=ದೆ ಕುತಂತ್ರ ಅಡಗಿದೆ ಎಂದು ತಿಳಿಸಿದ್ದಾರೆ.
- ರೌಡಿ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
- ನೈರುತ್ಯ ವಿಭಾಗದ ಡಿಸಿಪಿ ಕಚೇರಿ ಕಾರ್ಯಾರಂಭ
- ವೈಭವದಿಂದ ಜರುಗಿದ ಚಾಮುಂಡೇಶ್ವರಿ ವರ್ಧಂತಿ ಉತ್ಸವ
- ಕೊಡಗು, ಉತ್ತರ ಕನ್ನಡದಲ್ಲಿ ಮಳೆ ಅಬ್ಬರ, ಶಾಲೆಗಳಿಗೆ ರಜೆ
- ಛತ್ತೀಸ್ಗಡ : ಹೈಟೆಕ್ ಸಾಧನಗಳನ್ನು ಬಳಸಿ ಸರ್ಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಕಲು