Thursday, July 3, 2025
Homeರಾಜಕೀಯ | Politicsಸಿಎಂ ಕುರ್ಚಿ ಕುಸ್ತಿ : "ಸಿದ್ದರಾಮಯ್ಯರನ್ನು ಬೆಂಬಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳೇ ಇಲ್ಲ" ಎಂದ...

ಸಿಎಂ ಕುರ್ಚಿ ಕುಸ್ತಿ : “ಸಿದ್ದರಾಮಯ್ಯರನ್ನು ಬೆಂಬಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳೇ ಇಲ್ಲ” ಎಂದ ಡಿಕೆಶಿ

"I have no other choice but to support Siddaramaiah," said DK Shivakumar

ಚಿಕ್ಕಬಳ್ಳಾಪುರ,ಜು.2– ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಲಿದ್ದಾರೆ. ನನಗೆ ಬೇರೆ ಆಯ್ಕೆಗಳೇ ಇಲ್ಲ. ಅವರನ್ನು ಬೆಂಬಲಿಸಲೇಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ.

ನಂದಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಅವರನ್ನು ನಾನು ಬೆಂಬಲಿಸಲೇಬೇಕು. ಬೆಂಬಲಿಸುತ್ತೇನೆ. ಅವರ ಬೆನ್ನಿಗೆ ನಿಂತು ಸಹಕಾರ ಕೊಡುತ್ತೇನೆ. ಕಮಾಂಡ್‌ ತೀರ್ಮಾನಕ್ಕೆ ನಾನು ಬದ್ಧ. ಲಕ್ಷಾಂತರ ಕಾರ್ಯಕರ್ತರು ಪಕ್ಷವನ್ನು ಬೆಂಬಲಿಸುತ್ತಾರೆ. ನನ್ನಂತೆ ನೂರಾರು ಜನ ಶ್ರಮ ವಹಿಸಿ ದುಡಿದಿದ್ದಾರೆ ಎಂದಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡಿಕೆಶಿ, ಪಕ್ಷದಲ್ಲಿ ಎಲ್ಲಿಯೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಹಾಗುಹೋಗುಗಳನ್ನು ಗಮನಿಸಲು ರಣದೀಪ್‌ ಸುರ್ಜೇವಾಲ ಅವರು ಭೇಟಿ ನೀಡಿದ್ದಾರೆ ಎಂದು ಹೇಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರ ಎದುರು ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂದು ಕೇಳಿದಾಗ, ಈಗಿನಿಂದಲೇ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು, ಜವಾಬ್ದಾರಿ ವಹಿಸಲು ಸುರ್ಜೆವಾಲ ಅವರು ಬಂದಿದ್ದಾರೆ ಎಂದರು.

ಶಾಸಕ ಇಕ್ಬಾಲ್‌ ಹುಸೇನ್‌ಗೆ ನೋಟಿಸ್‌‍ ನೀಡಿರುವ ಬಗ್ಗೆ ಕೇಳಿದಾಗ, ಪಕ್ಷದಲ್ಲಿ ಶಿಸ್ತು ಮುಖ್ಯ. ಅವರಿಗೂ ನೋಟಿಸ್‌‍ ನೀಡುವೆ, ಬೇರೆಯವರಿಗೂ ನೋಟಿಸ್‌‍ ನೀಡಬೇಕಾಗುತ್ತದೆ. ನನ್ನ ಹೆಸರು ಹೇಳಿ, ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಬೇರೆ ಹೆಸರು ಏಕೆ? ಎಂದು ಪ್ರಶ್ನಿಸಿದರು.

ನೀವು ಪಕ್ಷ ಕಟ್ಟಲು ಕಷ್ಟಪಟ್ಟಿದ್ದೀರಿ, ಆ ಕಾರಣಕ್ಕೆ ನಿಮ ಹೆಸರು ಪ್ರಸ್ತಾಪಿಸಿದ್ದಾರೆ ಎಂದು ಕೇಳಿದಾಗ, ನಾನೊಬ್ಬನೆ ಪಕ್ಷ ಕಟ್ಟಿದ್ದೇನೆಯೇ? ನನ್ನಂತೆ ನೂರಾರು, ಸಾವಿರಾರು ಲಕ್ಷಾಂತರ ಜನ ಪಕ್ಷ ಕಟ್ಟಿದ್ದಾರೆ. ಮೊದಲು ಅವರ ನಂಬಿಕೆ ಉಳಿಸಿಕೊಳ್ಳೋಣ ಎಂದು ಹೇಳಿದರು.
ಸಚಿವ ಸಂಪುಟ ಸಭೆ ವಿಚಾರವಾಗಿ ಕೇಳಿದಾಗ, ನಾಡಪ್ರಭು ಕೆಂಪೇಗೌಡರ ಮಾಗಡಿ ಸಾರಕ ಅಭಿವೃದ್ಧಿ ಸೇರಿದಂತೆ ಬೆಂಗಳೂರಿಗೆ ಒಂದಷ್ಟು ಚಿಕ್ಕಪುಟ್ಟ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.

ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಈಗಾಗಲೇ ಕುಡಿಯುವ ನೀರಿನ ಯೋಜನೆಗಳನ್ನು ನೀಡಿದ್ದೇವೆ. ಬೆಂಗಳೂರು ಗ್ರಾಮಾಂತರವನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸಭೆಯಲ್ಲಿ ಇದನ್ನೂ ಪ್ರಸ್ತಾವನೆ ಮಾಡಲಾಗುವುದು ಎಂದು ಹೇಳಿದರು.

ಬೆಂಗಳೂರು ಉತ್ತರ ಜಿಲ್ಲೆ ಮರುನಾಮಕರಣದ ಬಗ್ಗೆ ಪ್ರಶ್ನೆ ಕೇಳಿದಾಗ, ಈ ಮೊದಲು ಕನಕಪುರ, ಚನ್ನಪಟ್ಟಣ, ರಾಮನಗರ ಭಾಗಗಳು ಹಾಗೂ ನಾನು ಪ್ರತಿನಿಧಿಸಿದ್ದ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದಾಗ ಬೆಂಗಳೂರು ಗ್ರಾಮಾಂತರ ಕ್ಷೇತ್ರವಾಗಿತ್ತು. ಬೆಂಗಳೂರು ದಕ್ಷಿಣ ಎಂದು ನಾಮಕರಣವಾದ ನಂತರ ಈ ಭಾಗದ ಶಾಸಕರ ಮನವಿ ಮೇರೆಗೆ ತೀರ್ಮಾನಕ್ಕೆ ಬರಲಾಗುವುದು ಎಂದು ಪ್ರತಿಕ್ರಿಯಿಸಿದರು.

RELATED ARTICLES

Latest News