ಬೆಂಗಳೂರು,ಜು.12– ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ತಮ ಪಾತ್ರ ಇಲ್ಲ ಎಂದು ಪುನರುಚ್ಚರಿಸಿರುವ ಮಾಜಿ ಸಚಿವ ಬಿ.ನಾಗೇಂದ್ರ ತಮ ಆಪ್ತ ಸಹಾಯಕರೂ ಸೇರಿದಂತೆ ಕಚೇರಿಯ ಸಿಬ್ಬಂದಿಗಳು ಹಣ ಪಡೆದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳಿಗ್ಗೆ ನಾಗೇಂದ್ರ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗಾಗಿ ಶಾಂತಿನಗರದ ಕಚೇರಿಗೆ ಕರೆತರುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಯಿಂದ ತಮನ್ನು ಕರೆತಂದಿದ್ದಾರೆ. ನಮ ಕಚೇರಿಯ ಸಿಬ್ಬಂದಿಗಳು ಹಣ ಪಡೆದಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಹಗರಣ ಬೆಳಕಿಗೆ ಬಂದ ವೇಳೆಯಲ್ಲಿ ನಾಗೇಂದ್ರ ಅವರು ಪತ್ರಿಕಾಗೋಷ್ಠಿ ನಡೆಸಿ ಹಣ ಅಕ್ರಮ ವರ್ಗಾವಣೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳ ಪಾತ್ರ ಇದೆ. ಅಧಿಕಾರಿಗಳ ನಡವಳಿಕೆಗಳು ಸಂಶಯಾಸ್ಪದ ಎಂದು ಹೇಳಿದರು.
ಅಕ್ರಮ ಹಣ ವರ್ಗಾವಣೆ ಕುರಿತು ನಮಗೆ ಯಾವುದೇ ಮಾಹಿತಿ ಇಲ್ಲ ಎಂಬ ಸಮರ್ಥನೆ ನೀಡಿದ್ದರು. ಆತಹತ್ಯೆ ಮಾಡಿಕೊಂಡ ನಿಗಮದ ಅಧೀಕ್ಷಕ ಚಂದ್ರಶೇಖರನ್ ಮರಣ ಪತ್ರದಲ್ಲಿ ಸಚಿವರ ಮೌಖಿಕ ಸೂಚನೆ ಎಂದು ಉಲ್ಲೇಖಿಸಿರುವ ಬಗ್ಗೆ ತನಿಖೆಯ ಬಳಿಕವಷ್ಟೇ ಸತ್ಯಾಂಶ ಹೊರಬರಲಿದೆ ಎಂದು ಹೇಳಿಕೊಂಡಿದ್ದರು.
ಈಗ ಅದೇ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ಹಗರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.