Monday, October 14, 2024
Homeರಾಜ್ಯನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : ಸಿಎಂ ಪುನರುಚ್ಚಾರ

ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : ಸಿಎಂ ಪುನರುಚ್ಚಾರ

I have not done anything wrong, I will not resign: CM

ಮೈಸೂರು,ಸೆ.27- ರಾಜಭವನದ ಅಧಿಕಾರ ವ್ಯಾಪ್ತಿ ಹಾಗೂ ದುರುಪಯೋಗದ ಬಗ್ಗೆ ದೇಶವ್ಯಾಪ್ತಿಯಲ್ಲಿ ಚರ್ಚೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮೈಸೂರು ಪ್ರವಾಸ ಕೈಗೊಂಡಿರುವ ಸಿಎಂ, ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ನಾನು ತಪ್ಪು ಮಾಡಿಲ್ಲ, ಹಾಗಾಗಿ ರಾಜೀನಾಮೆ ಕೊಡುವುದಿಲ್ಲ. ಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ ನನ್ನ ರಾಜೀನಾಮೆ ಕೇಳಲು ಬಿಜೆಪಿಗೆ ಯಾವ ನೈತಿಕತೆ ಇದೆ ಎಂದು ಪ್ರತಿಕ್ರಿಯಿಸಿದರು.ರಾಜ್ಯಪಾಲರು ಆಡಳಿತದಲ್ಲಿ ತಲೆ ಹಾಕಬಾರದು, ರಾಜ್ಯದ ಜನರು ನಮಗೆ 5 ವರ್ಷ ಅಧಿಕಾರ ನಡೆಸಿ, ಅಭಿವೃದ್ಧಿ ಮಾಡಿ ಎಂದು ಅವಕಾಶ ನೀಡಿದ್ದಾರೆ. ಕೇಂದ್ರ ಸರ್ಕಾರ ರಾಜಭವನ ಸೇರಿ ಎಲ್ಲಾ ಕಡೆ ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ನಿಮ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆಯಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನಾನು ಏಕೆ ರಾಜೀನಾಮೆ ಕೊಡಬೇಕು, ತಪ್ಪು ಮಾಡಿದ್ದರೆ ಮಾತ್ರ ರಾಜೀನಾಮೆ ಕೊಡಬೇಕು ಎಂದು ಹೇಳಿದರು.

ಗೋದ್ರಾ ಗಲಭೆ ಆಗಿದ್ದಾಗ ಮೋದಿ ರಾಜೀನಾಮೆ ನೀಡಿದ್ದರಾ, ಎಫ್‌ಐಆರ್‌ ಆಗಿ ಜಾಮೀನು ಪಡೆದಿರುವ ಕುಮಾರಸ್ವಾಮಿ ಏಕೆ ರಾಜೀನಾಮೆ ಕೊಟ್ಟಿಲ್ಲ, ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಕಾನೂನು ಹೋರಾಟ ಮುಂದುವರೆಸುತ್ತೇನೆ, ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಶ್ನೆಯೇ ಇಲ್ಲ, ರಾಜ್ಯಪಾಲರ ಯಾವ ಪತ್ರಗಳಿಗೂ ಸಿಎಸ್‌‍ ಉತ್ತರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಖಡಕ್ಕಾಗಿ ಹೇಳಿದರು.

RELATED ARTICLES

Latest News