ಬೆಳಗಾವಿ,ಜ.29- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಎಂದು ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದಾಗಲೆ ತಿಳಿಸಿದ್ದೆ ನನಗೆ 80 ವಯಸ್ಸಾಗ್ತಿದೆ ಹೀಗಾಗಿ ಚುನಾವಣೆಯಲ್ಲಿ ಸ್ರ್ಪಸುವುದಿಲ್ಲ ಎಂದು ತಿಳಿಸಿದ್ದಾರೆ.
ಸದ್ಯದಲ್ಲೆ ಪಕ್ಷ ಸಂಘಟನೆಗೆ ರಾಜ್ಯದ ಉದ್ದಗಲಕ್ಕೂ ನಾನು ಪ್ರವಾಸ ಮಾಡುತ್ತೇನೆ ,ಪುತ್ರ ಬಿ.ವೈ.ವಿಜಯೇಂದ್ರ ಕೂಡ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುತ್ತಾರೆ.ಅವರೊಂದಿಗೆ ನಾನು ಓಡಾಡುತ್ತಿದ್ದೇನೆ ಎಂದರು. ನಾನೇನು ರಾಜಕೀಯ ನಿವೃತ್ತಿ ಪಡೆದಿಲ್ಲ.
ಅಭಿಮಾನಿಗಳ 13 ವರ್ಷಗಳ ಕನಸು ನನಸು, ವಿಷ್ಣು ಸ್ಮಾರಕ ಲೋಕಾರ್ಪಣೆ
ದೇವರು ಶಕ್ತಿ ನೀಡಿದರೇ ಮುಂದಿನ ಚುನಾವಣೆಯಲ್ಲೂ ಓಡಾಡುತ್ತೇನೆ ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನಿಸುವೆ. ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪ್ರಧಾನಮಂತ್ರಿ ಆಗಿದ್ದಾಗ ನನ್ನನ್ನು ಕೇಂದ್ರಕ್ಕೆ ಆಹ್ವಾನಿಸಿದ್ದರು. ಪಕ್ಷ ರಾಜ್ಯದಲ್ಲಿ ನನಗೆ ಎಲ್ಲ ಸ್ಥಾನಮಾನ, ಅಧಿಕಾರ, ಗೌರವ ನೀಡಿದೆ. ಋಣ ತೀರಿಸುವ ಜವಾಬ್ದಾರಿ ನನ್ನದು, ರಾಜ್ಯಾದ್ಯಂತ ಸಂಚರಿಸುತ್ತೇನೆ ಎಂದು ತಿಳಿಸಿದರು.
ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್‍ಗಾಗಿ ಪೈಪೋಟಿ ನಡೆದಿರುವ ವಿಚಾರವಾಗಿ ಮಾತನಾಡಿದ ಅವರು ಸರ್ಕಾರ ರಚಿಸುವ ಪಕ್ಷಕ್ಕೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳವಾಗಿರುತ್ತೆ. ನಾವೆಲ್ಲರೂ ಚರ್ಚಿಸಿ ಯೋಗ್ಯ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ.
ಒಂದಲ್ಲ, 2 ಸರ್ವೆ ಮಾಡಿಸಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತೇವೆ. ಟಿಕೆಟ್ ವಿಚಾರದಲ್ಲಿ ನಾವು ಯಾವುದೇ ರಾಜಿ ಆಗಲ್ಲ. ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕುತ್ತೇವೆ ಎಂದು ಸ್ಪಷ್ಟನೆ ನೀಡಿದರು.
#BSYeddyurappam, #BJP, #AssemblyElection2023,