Tuesday, December 3, 2024
Homeಮನರಂಜನೆಜಾನಿ ಮಾಸ್ಟರ್‌ಗೆ ನೀಡಿದ್ದ ರಾಷ್ಟ್ರೀಯ ಪ್ರಶಸ್ತಿ ವಾಪಸ್

ಜಾನಿ ಮಾಸ್ಟರ್‌ಗೆ ನೀಡಿದ್ದ ರಾಷ್ಟ್ರೀಯ ಪ್ರಶಸ್ತಿ ವಾಪಸ್

I&B Ministry Suspends Jani Master’s Best Choreographer National Award After Arrest On POCSO Charges

ನವದೆಹಲಿ,ಅ.6- ಅತ್ಯಾಚಾರ ಆರೋಪ ಎದುರಿಸುತ್ತಿರುವ ಹೆಸರಾಂತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮಾನತು ಮಾಡಿದೆ ಎಂದು ವರದಿಯಾಗಿದೆ.

ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಅವರ ನಿಜವಾದ ಹೆಸರು ಶೇಕ್‌ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣದಡಿ ಅವರನ್ನು ಸೈಬರಾಬಾದ್‌ ಪೊಲೀಸರು ಸೆ.19ರಂದು ಗೋವಾದಲ್ಲಿ ಬಂಧಿಸಿದ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.ಆದರೆ, ಅ.3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚಿಗೆ ಮಧ್ಯಂತರ ಜಾಮೀನು ಪಡೆದಿದ್ದರು.

ತಿರುಚಿತ್ರಂಬಲಂ ಚಿತ್ರದ ಮೇಘಮ್‌ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಅವರು ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದರು. ಇದೀಗ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇದೀಗ ಅವರ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಾನತುಗೊಳಿಸಿದೆ.

ಅ.8ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಾನಿ ಮಾಸ್ಟರ್‌ ಅವರಿಗೆ ನೀಡಿದ್ದ ಆಹ್ವಾನವನ್ನೂ ಹಿಂತೆಗೆದುಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

RELATED ARTICLES

Latest News