Thursday, May 2, 2024
Homeಇದೀಗ ಬಂದ ಸುದ್ದಿವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ

ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ

ಅಹಮದಾಬಾದ್, ನ.18- ಪ್ರಸಕ್ತ ಸಾಲಿನ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯ ನಾಳೆ ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಹಣಾಹಣಿ ಕ್ರೀಡಾ ರಸಿಕರಿಗೆ ರಸದೌತಣ ಉಣಬಡಿಸಲಿದೆ.

ಈ ಬಾರಿ ಫೈನಲ್ ಪಂದ್ಯಕ್ಕೆ ಘಟಾನುಘಟಿಗಳು ಫೈನಲ್ ಪಂದ್ಯಕ್ಕೆ ಸಾಕ್ಷಿ ಯಾಗುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸೂಪರ್ ಸ್ಟಾರ್‍ಗಳಾದ ಅಮಿತಾಬ್ ಬಚ್ಚನ್, ರಜನಿಕಾಂತ್, ಕ್ರಿಕೆಟ್ ದಿಗ್ಗಜರಾದ ಕಪಿಲ್ ದೇವ್, ಸಚಿನ್, ಧೋನಿ ಸೇರಿದಂತೆ ಅತಿಗಣ್ಯ ವ್ಯಕ್ತಿಗಳು ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.

ಪಂದ್ಯ ವೀಕ್ಷಣೆಗೆ ಆಸ್ಟ್ರೇಲಿಯಾ ಪ್ರಧಾನಿಗಳಿಗೂ ಮೋದಿ ಆಹ್ವಾನ ನೀಡಿದ್ದು ಅವರು ಪಂದ್ಯ ವೀಕ್ಷಣೆಗೆ ಆಗಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಆಟಗಾರರ ಫಾರ್ಮ್ ನೋಡಿದಾಗ ನಿಶ್ಚಿತವಾಗಿ ಭಾರತ ಈ ಫೈನಲ್ ಪಂದ್ಯ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ.

ಆದರೆ ಆಸ್ಟ್ರೇಲಿಯಾ ತಡ ಈಗಾಗಲೇ ಐದು ಬಾರಿ ವಿಶ್ವಕಪ್ ಟ್ರೋಫಿನ್ನು ಎತ್ತಿಹಿಡಿದಿರುವ ತಂಡವಾಗಿದ್ದು ಯಾವ ಕಾರಣಕ್ಕೂ ಆಸಿಸ್ ಪಡೆಯನ್ನು ಹಗುರವಾಗಿ ಪಡಿಗಣಿಸುವಂತಿಲ್ಲ ಎನ್ನುವುದು ಅತ್ಯಂತ ಸ್ಪಷ್ಟ.
ಇನ್ನು ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳ ಮಧ್ಯೆ ಕಠಿಣ ಪೈಪೋಟಿ ನಡೆಯುವುದು ನಿಶ್ಚಿತ. ಈಗಾಗಲೇ ಲೀಗ್ ಹಂತದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು ಸುಲಭವಾಗಿ ಮಣಿಸಿತ್ತು.

ರಾಜ್ಯಪಾಲರು ತಿರಸ್ಕರಿಸಿದ ಮಸೂದೆ ಮರು ಮಂಡನೆ ಮಾಡಿದ ಸ್ಟಾಲಿನ್

ಹಾಗಾಗಿ ಭಾರತ ತಂಡದ ಆಟಗಾರರ ಆತ್ಮವಿಶ್ವಾಸ ಹೆಚ್ಚಿರಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಆಸ್ಟ್ರೇಲಿಯಾದ ಈ ನಾಲ್ವರು ಆಟಗಾರರು ಸವಾಲಾಗಲಿದ್ದಾರೆ. ಈ ನಾಲ್ಕು ಆಟಗಾರರನ್ನು ಭಾರತಕ್ಕೆ ಕಟ್ಟಿ ಹಾಕಲು ಸಾಧ್ಯವಾದರೆ ಟೀಮ್ ಇಂಡಿಯಾ ಗೆಲುವು ನಿಶ್ಚಿತ. ಆಸ್ಟ್ರೇಲಿಯಾದ ಸ್ಪೋಟಕ ಆರಂಭಿಕ ಆಟಗಾರ ಡೇವಿಡ್ ವಾರ್ನರ್, ಸ್ಮಿತ್, ಗ್ಲೆನ್ ಮ್ಯಾಕ್ಸ್‍ವೆಲ್ ಹಾಗೂ ಆಡಂ ಜಂಪ ಅವರನ್ನು ಕಟ್ಟಿ ಹಾಕುವಲ್ಲಿ ಭಾರತೀಯ ಬೌಲರ್‍ಗಳು ಯಶಸ್ವಿಯಾದರೆ ಭಾರತ ಮೂರನೇ ಬಾರಿ ವಿಶ್ವಕಪ್ ಎತ್ತಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಐದು ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯ ಮೊದಲ ಎರಡು ಪಂದ್ಯಗಳನ್ನು ಸೋಲುವ ಮೂಲಕ ಸೇಮಿಫೈನಲ್ ಪ್ರವೇಶಿಸುವುದೇ ಕಷ್ಟ ಸಾಧ್ಯ ಎನ್ನುವಂತಿದ್ದ ಪರಿಸ್ಥಿತಿಯಲ್ಲಿ ಆ ತಂಡ ಪುಟಿದೆದ್ದು ಬಂದು ಫೈನಲ್ ತಲುಪಿರುವುದು ಸಾಮಾನ್ಯದ ವಿಷಯವೇನಲ್ಲ.

ಆದರೂ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಎಂತಹ ಸಂದರ್ಭದಲ್ಲೂ ಮಿಂಚಬಲ್ಲ ಸಾಮಥ್ರ್ಯ ಹೊಂದಿರುವುದರಿಂದ ಎರಡು ತಂಡಗಳ ನಡುವೆ ಸಮಬಲದ ಹೋರಾಟ ನಿರೀಕ್ಷಿಸಲಾಗಿದೆ.

ರೋಹಿತ್ ಶರ್ಮ, ಶುಭಮನ್‍ಗಿಲ್, ಕೋಹ್ಲಿ, ರಾಹುಲ್, ಶ್ರೇಯಸ್ ಅಯ್ಯರ್ ಬ್ಯಾಟಿಂಗ್‍ನಲ್ಲಿ ಮಿಂಚು ಹರಿಸುತ್ತಿದ್ದರೆ, ಬೌಲಿಂಗ್ ವಿಭಾಗದಲ್ಲಿ ಶಮಿ, ಬೂಮ್ರಾ, ಕುಲದಿಪ್, ರವೀಂದ್ರ ಜಡೆಜಾ ಚಮತ್ಕಾರ ಮಾಡುತ್ತಿರುವುದರಿಂದ ಈ ಬಾರಿ ವಿಶ್ವಕಪ್ ನಮ್ಮದೇ ಎಂಬ ವಿಶ್ವಾಸ ಮೂಡಿಸಿದೆ.

RELATED ARTICLES

Latest News