Friday, February 21, 2025
Homeರಾಜಕೀಯ | Politicsಕನ್ನಡಿಗರ ಸ್ವಾಭಿಮಾನ ಕೆಣಕಿದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಅಡ್ರೆಸ್ಸ್ ಇಲ್ಲದಂತಾಗುತ್ತೆ : ಅಶೋಕ್ ಕಿಡಿ

ಕನ್ನಡಿಗರ ಸ್ವಾಭಿಮಾನ ಕೆಣಕಿದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಅಡ್ರೆಸ್ಸ್ ಇಲ್ಲದಂತಾಗುತ್ತೆ : ಅಶೋಕ್ ಕಿಡಿ

If the self-respect of Kannadigas is hurt, Congress will not have an address in Karnataka too: Ashok Kidi

ಬೆಂಗಳೂರು,ಫೆ.19- ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ. ಈಗಾಗಲೇ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂತಾಗಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಿರ್ನಾಮ ಆಗುವುದು ಗ್ಯಾರಂಟಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂಧನ ಸಚಿವ ಕೆ.ಜೆ ಜಾರ್ಜ್ ಅವರೇ, ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ? ಎಂದು ಪ್ರಶ್ನೆ ಮಾಡಿದ್ದಾರೆ.

ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಎಂದು ಮತದಾರರೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ. ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಎಂದು ಜನತೆ ಕೇಳಿಯೂ ಇರಲಿಲ್ಲ ಎಂದು ಹೇಳಿದ್ದಾರೆ. ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ?
ನಿಮ್ಮ ಕೈಲಾದರೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಗೌರವದಿಂದ ಜಾರಿ ಮಾಡಿ. ನಿಮ್ಮ ಕೈಲಾಗದಿದ್ದರೆ ಬಿಟ್ಟುಬಿಡಿ ಎಂದಿದ್ದಾರೆ.

ಗ್ಯಾರೆಂಟಿ ಯೋಜನೆಗಳು ಜಾರಿ ಆಗುವ ಮುನ್ನವೂ ಜನರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಅವು ಇಲ್ಲದೆಯೂ ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕಾಂಗ್ರೆಸ್ ಕೋಳಿ ಕೂಗಿದರೆ ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ ಎಂದು ಅಶೋಕ್ ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Latest News