ಬೆಂಗಳೂರು,ಫೆ.3- ವಾಹನ ಸವಾರರೇ ಎಚ್ಚರ.. ಫುಟ್ಪಾತ್ ಮೇಲೆ ವಾಹನ ಚಲಾಯಿಸಿದರೆ ಡ್ರೈವಿಂಗ್ ಲೈಸೆನ್ಸ್ ರದ್ದಾಗಲಿದೆ.ನಗರ ಸಂಚಾರಿ ಪೊಲೀಸರು ಸಂಚಾರಿ ನಿಯಮಗಳ ಬಗ್ಗೆ ಪ್ರತಿನಿತ್ಯ ಜಾಗೃತಿ ಮೂಡಿಸಿ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದರೂ ಸಹ ಕೆಲವರು ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸುತ್ತಿರುವುದು ಕಂಡು ಬರುತ್ತಿದೆ.
ಹೀಗಾಗಿ, ನಗರ ಸಂಚಾರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿ, ಡ್ರೈವಿಂಗ್ ಲೈಸ್ಸೆ್ ಅಮಾನತು ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಮೊದಲ ಬಾರಿಗೆ ದಂಡ ಹಾಕಲಾಗುತ್ತದೆ. ಮತ್ತೆ ಮತ್ತೆ ಸಿಕ್ಕಿಬಿದ್ದರೇ, ಅವರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡುವಂತೆ ಸಂಚಾರಿ ಪೊಲೀಸರು ಆರ್ಟಿಒ ಅಧಿಕಾರಿಗಳಿಗೆ ಶಿಪಾರಸ್ಸು ಮಾಡುತ್ತಾರೆ.
ಹೀಗಾಗಿ, ಇನುಂದೆ ಫುಟ್ಪಾತ್ ಮೇಲೆ ವಾಹನ ಓಡಿಸುವ ಮುನ್ನ ಯೋಚಿಸಿ ಎಂದು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ದಂಡಾಸ್ತ್ರಕ್ಕೂ ಜಗ್ಗದ ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲು ತೀರ್ಮಾನಿಸಿ ಆರ್ಟಿಒಗೆ ಶಿಫಾರಸು ಮಾಡಲಿದ್ದಾರೆ.