ಅಕ್ರಮ ಶಸ್ತ್ರಾಸ್ತ್ರ ಕಾರ್ಖಾನೆ ಮೇಲೆ ಪೊಲೀಸರ ದಾಳಿ, ಇಬ್ಬರ ಬಂಧನ

Social Share

ಜಲೌನ್ (ಯುಪಿ), ಫೆ. 10 – ಹಳ್ಳಿಯೊಂದರಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ತಯಾರಿಸುತ್ತಿದ್ದ ಕಾರ್ಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಪೊಲೀಸರು ಅಕ್ರಮ ಪಿಸ್ತೂಲ್ ಮತ್ತು ಬಂದೂಕುಗಳನ್ನು ತಯಾರಿಸುತ್ತಿದ್ದ ಇಬ್ಬರನ್ನು ಬಂಧಿಸಿ ವಿಚಾರಣೆ ವೇಲೆ ಸಿಕ್ಕ ಮಾಹಿತಿ ಮೇರೆಗೆ ಬೋಹಾದ್‍ಪುರದ ಅರಣ್ಯದಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾರ್ಖಾನೆಯನ್ನು ಭೇದಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಈರಾಜ್ ರಾಜಾ ತಿಳಿಸಿದಾರೆ.

ಏಳು 315-ಬೋರ್ ಪಿಸ್ತೂಲ್ , ಒಂದು ಡಬಲ್ ಬ್ಯಾರೆಲ್ ಗನ್, ಒಂದು 12-ಬೋರ್ ಪಿಸ್ತೂಲ್ ಸೇರಿದಂತೆ ಅಕ್ರಮವಾಗಿ ಆಯುಧಗಳನ್ನು ತಯಾರಿಸಲು ಬಳಸುತ್ತಿದ್ದ ವಸ್ತುಗಳು ಮತ್ತು ಎರಡು ಜೀವಂತ ಕಾಟ್ರಿಡ್ಜ್‍ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ,

ಮನೆಗಳ್ಳನ ಬಂಧನ : 18 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ವಶ

ಬಂಧಿತರು 5,000 ರಿಂದ 7,000 ರೂ.ಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ ಇಬ್ಬರು ಆರೋಪಿಗಳಿಂದ ಈ ಶಸ್ತ್ರಾಸ್ತ್ರಗಳನ್ನು ಯಾರು ಖರೀದಿಸಿದ್ದಾರೆ ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ತಿಳಿಸಿದಾರೆ.

Illegal arms , factory, busted, Uttar Pradesh, village,

Articles You Might Like

Share This Article