Sunday, November 10, 2024
Homeರಾಜ್ಯಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ಮೌಲ್ಯದ ಮದ್ಯ ವಶ

ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ಮೌಲ್ಯದ ಮದ್ಯ ವಶ

ಬೆಂಗಳೂರು, ಜ.23- ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಅಬಕಾರಿ ಪೊಲೀಸರು 3240 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಮೂಲದ ಆರೋಪಿಗಳಾದ ಪರಮೇಶ್ವರ್ ದೇವಪ್ಪ ನಾಯಕ ಹಾಗೂ ವಾಹನ ಚಾಲಕ ಅಮೀತ ಪಡತಾರೆ ಎಂಬುವವರನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ.

ಸಿದ್ದರಾಮಯ್ಯನವರು ರಾಮ ಭಕ್ತರಲ್ಲ, ಹೈಕಮಾಂಡ್ ಭಕ್ತರು : ಆಶೋಕ್ ವಾಗ್ದಾಳಿ

ಅಬಕಾರಿ ಜಂಟಿ ಆಯುಕ್ತ ಎ.ಎಲ್.ನಾಗೇಶ್ ಅವರ ಮಾರ್ಗದರ್ಶನದಲ್ಲಿ ಉಪ ಆಯುಕ್ತ ವೀರಣ್ಣ ಬಾಗೇವಾಡಿ ನೇತೃತ್ವದಲ್ಲಿ ವಲಯ-30ರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಮಹದೇವಪುರ ವಲಯ ನಿರೀಕ್ಷಕರಾದ ಅಬೂಬಕರ್ ಮುಜಾವರ್ ಅವರ ನೇತೃತ್ವದ ತಂಡ ಹಳೆ ಮದ್ರಾಸ್ ರಸ್ತೆ, ದೂರವಾಣಿ ನಗರದ ಬಿಎಂಟಿಸಿ ಡಿಪೋ-24ರ ಬಳಿ ವಾಹನವನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಮದ್ಯ ಸಾಗಾಟ ಕಂಡುಬಂದಿದೆ.

ಮೇಲ್ನೋಟಕ್ಕೆ ಇದು ನಕಲಿ ಮದ್ಯವೆಂದು ಕಾಣುತ್ತಿದ್ದು, ತನಿಖೆ ಕೈಗೊಳ್ಳಲಾಗಿದೆ. ವಶಪಡಿಸಿಕೊಂಡ ಮದ್ಯದ ಮಾಲು ಸುಮಾರು 50 ಲಕ್ಷ ರೂ. ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡು ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದೆ.

RELATED ARTICLES

Latest News