ಬೆಳಗಾವಿ,ಡಿ.5-ರಾಜ್ಯದಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವವರಿಂದ 87.51 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. ವಿಧಾನಪರಿಷತ್‍ನಲ್ಲಿಂದು ಸದಸ್ಯ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಅಕ್ರಮ ಗಣಿಗಾರಿಕೆ ಮತ್ತು ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಮಾಡಿರುವ ಗಣಿ ಮಾಲೀಕರ ವಿರುದ್ಧ 87.51 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದರು.
ಕಳೆದ ಮೂರು ವರ್ಷಗಳ ಅವಯಲ್ಲಿ 42,53,50,000 ರೂ. ದಂಡ ಹಾಗೂ 211 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಇತ್ತೀಚೆಗೆ ಸಚಿವ ಸಂಪುಟ ಉಪಸಮಿತಿಯಲ್ಲೂ ಇದರ ಬಗ್ಗೆ ವ್ಯಾಪಕವಾಗಿ ಚರ್ಚಿಸಿ ಎಲ್ಲೆಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗಣಿಗಾರಿಕೆ ನಡೆಸಿದ್ದಾರೋ ಅಂತಹ ಕಡೆ ಇನ್ನಷ್ಟು ದಂಡ ಹಾಕಬೇಕೆಂಬ ಚರ್ಚೆ ಇದೆ ಎಂದು ಹೇಳಿದರು.
ಬಿಜೆಪಿ-ಜೆಡಿಎಸ್ ಮೋದಿ ನಾಯಕತ್ವದಲ್ಲಿ ಮುನ್ನಡೆಯಲಿದೆ : ದೇವೇಗೌಡರು
ರಾಜ್ಯದ ಎಲ್ಲಾ ಕಡೆ ಡ್ರೋನ್ ಮೂಲಕ ಸರ್ವೆ ನಡೆಸಿ ಕಾನೂನು ಉಲ್ಲಂಘನೆ ಮಾಡಿರುವವರ ಮೇಲೆ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದರಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.