Friday, May 3, 2024
Homeಬೆಂಗಳೂರುಬೆಂಗಳೂರಲ್ಲಿ ಅಕ್ರಮ ನೀರು ಸಂಪರ್ಕ ಹೊಂದಿದ್ದರೆ ಜೈಲು ಗ್ಯಾರಂಟಿ..!

ಬೆಂಗಳೂರಲ್ಲಿ ಅಕ್ರಮ ನೀರು ಸಂಪರ್ಕ ಹೊಂದಿದ್ದರೆ ಜೈಲು ಗ್ಯಾರಂಟಿ..!

ಬೆಂಗಳೂರು,ಡಿ.12- ನಗರದಲ್ಲಿ ಹೆಚ್ಚುತ್ತಿರುವ ಅಕ್ರಮ ನೀರು ಸಂಪರ್ಕ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಜಲ ಮಂಡಳಿ ನೀರು ಕಳ್ಳರನ್ನು ಮಟ್ಟ ಹಾಕಲು ಮುಂದಾಗಿದೆ. ಅಕ್ರಮ ನೀರಿನ ಸಂಪರ್ಕ ಪಡೆದ ಸಿಲಿಕಾನ್ ಸಿಟಿ ಜನರ ಮೇಲೆ ಕಾನೂನು ಅಸ್ತ್ರ ಪ್ರಯೋಗಿಸಲು ತೀರ್ಮಾನಿಸಲಾಗಿದೆ ಎಂದು ಜಲ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಇನ್ಮೇಲೆ ಅಕ್ರಮ ನೀರಿನ ಸಂಪರ್ಕ ಪಡೆದಿದ್ರೆ ದಂಡ ಅಲ್ಲ ಅದರ ಬದಲಿಗೆ ಜೈಲು ಶಿಕ್ಷೆ ವಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ನಗರದಲ್ಲಿ ಅನಕೃತ ಕಾವೇರಿ ನೀರಿನ ಸಂಪರ್ಕ ಪಡೆದರೆ ಅದನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಲಾಗುತ್ತಿದೆ. ಹೀಗಾಗಿ ಅನಧಿಕೃತ ಸಂಪರ್ಕ ಪಡೆದವರ ಮೇಲೆ ಕಾನೂನು ಕ್ರಮಕ್ಕೆ ಜಲಮಂಡಳಿ ಸನ್ನದ್ಧವಾಗಿದೆ.

ಆರ್ಟಿಕಲ್ 370 ಕುರಿತ ಸುಪ್ರೀಂ ಆದೇಶ ಸ್ವಾಗತಾರ್ಹ : ದೇವೇಗೌಡರು

ನಗರದಲ್ಲಿ ಸಾವಿರಾರು ಮಂದಿ ಅನಧಿಕೃತ ನೀರಿನ ಸಂಪರ್ಕ ಪಡೆದುಕೊಂಡಿದ್ದಾರೆ ಹೀಗಾಗಿ ರಾಜಧಾನಿಯಲ್ಲಿ ಶೇ 35 ರಷ್ಟು ನೀರು ಲೆಕ್ಕಕ್ಕೆ ಸಿಗ್ತಿಲ್ಲ. ಇದರ ಪರಿಣಾಮ ಅನಕೃತ ಸಂಪರ್ಕಗಳನ್ನ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದ್ದರೂ ಅದು ಕೇವಲ ದಂಡಕ್ಕೆ ಮಾತ್ರ ಸೀಮಿತವಾಗಿತ್ತು. ಇಷ್ಟು ದಿನ ಜಲಮಂಡಳಿ ಇಂಜಿನಿಯರ್ಸ್ ದಂಡ ಹಾಕಿ ಸೈಲೆಂಟ್ ಆಗ್ತಿದ್ದರು.

ಇದೀಗ ಅನಧಿಕೃತ ನೀರಿನ ಸಂಪರ್ಕ ಪಡೆದವರ ಮೇಲೆ ಎಫ್ ಐಆರ್ ದಾಖಲಿಸುವಂತೆ ಜಲಮಂಡಳಿಯ ಎಲ್ಲಾ ಇಂಜಿನಿಯರ್ ಗಳಿಗೆ ಖಡಕ್ ಸೂಚನೆ ನೀಡಿದ್ದೇನೆ ಎಂದು ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 12 ಲಕ್ಷಕ್ಕೂ ಹೆಚ್ಚಿನ ಕಾವೇರಿ ನೀರಿನ ಸಂಪರ್ಕಗಳಿವೆ.

RELATED ARTICLES

Latest News