ಇಂದು ಬಿಜೆಪಿ ಮಹತ್ವದ ಶಾಸಕಾಂಗ ಸಭೆ

Social Share

ಬೆಂಗಳೂರು, ಫೆ.15- ಬಜೆಟ್ ಅವೇಶನದಲ್ಲಿ ಪ್ರತಿಪಕ್ಷಗಳ ಅಸ್ತ್ರಕ್ಕೆ ಪ್ರತಿತಂತ್ರ ರೂಪಿಸಲು ಮುಂದಾಗಿರುವ ಆಡಳಿತಾರೂಢ ಬಿಜೆಪಿ ಇಂದು ಸಂಜೆ ನಗರದ ಖಾಸಗಿ ಹೊಟೇಲ್‍ನಲ್ಲಿ ಮಹತ್ವದ ಶಾಸಕಾಂಗ ಸಭೆ ಕರೆಯಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಪಕ್ಷದ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರು, ಶಾಸಕರು ಶಾಸಕಾಂಗ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಶುಕ್ರವಾರ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿದ್ದಾರೆ.
ಬಜೆಟ್ ಮಂಡನೆಗೆ ಮುನ್ನ ದಿ ಕ್ಯಾಪಿಟಲ್ ಹೊಟೇಲ್‍ನಲ್ಲಿ ಸಂಜೆ 7 ಗಂಟೆಗೆ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿರುವ ಬಿಜೆಪಿ, ಬಜೆಟ್‍ನ್ನು ಯಾವುದೇ ತೊಂದರೆಯಿಲ್ಲದೆ ಅಂಗೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ಕಾರ್ಯತಂತ್ರಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.

ಇದು ಚುನಾವಣೆ ವರ್ಷವಾಗಿರುವುದರಿಂದ ಬಜೆಟ್‍ಗೆ ಕಾಂಗ್ರೆಸ್ ಮತ್ತು ಜೆಡಿಎಸ್‍ನಿಂದ ತೀವ್ರ ವಿರೋಧ ವ್ಯಕ್ತವಾಗಲಿದ್ದು, ಶಾಸಕರು ಪೂರ್ಣ ಪ್ರಮಾಣದಲ್ಲಿ ಹಾಜರಿರಲು ಸೂಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇದು ಕೊನೆಯ ಶಾಸಕಾಂಗ ಪಕ್ಷದ ಸಭೆಯಾಗುವ ಸಾಧ್ಯತೆ ಇದ್ದು, ಮಾಚ್ರ್ನಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಲಿದೆ.

ಫೆಬ್ರವರಿ 23ರಂದು ಅವೇಶನ ಮುಕ್ತಾಯಗೊಳ್ಳಬಹುದು. ಹೀಗಾಗಿ ಶಾಸಕರು ತಮ್ಮ ಕ್ಷೇತ್ರಗಳಿಗೆ ಮರಳಬಹುದು ಎಂಬ ಚರ್ಚೆ ಇದೆ. ಆಡಳಿತ ಮತ್ತು ವಿರೋಧ ಪಕ್ಷಗಳ ಶಾಸಕರು ತಮ್ಮ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತಿರುವುದರಿಂದ ಬಜೆಟ್ ಅವೇಶನದಲ್ಲಿ ಪೂರ್ಣ ಪ್ರಮಾಣದಲ್ಲಿ ಭಾಗವಹಿಸುವುದು ಅನುಮಾನವಾಗಿದೆ.

ಬಿಜೆಪಿಯು ಬಜೆಟ್ ಅವೇಶನದಲ್ಲಿ ಅನೇಕ ಮಸೂದೆಗಳಿಗೆ ಅಂಗೀಕಾರ ಬಯಸುತ್ತದೆ. ಕಲಾಪವನ್ನು ಬೇಗ ಮುಗಿಸುವಂತೆ ಹಲವು ಶಾಸಕರು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

#important, #BJP, #legislativemeeting, #today,

Articles You Might Like

Share This Article