Friday, November 22, 2024
Homeರಾಜಕೀಯ | Politicsಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಹೆಚ್ಡಿಕೆ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಹೆಚ್ಡಿಕೆ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು,ಮಾ.6- ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಿರುವ ಎನ್‍ಡಿಎ ಮೈತ್ರಿಕೂಟದ ರಾಜ್ಯ ನಾಯಕರು ನಿನ್ನೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಮಹತ್ವದ ಸಭೆ ನಡೆಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಸಭೆ ಸೇರಿ ಚುನಾವಣೆ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಮಾಲೋಚನೆ ನಡೆಸಿದ್ದಾರೆ.

ಸಭೆಯಲ್ಲಿ ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, ಡಿ.ನಾಗರಾಜಯ್ಯ, ರಾಜ್ಯಸಭೆಯ ಮಾಜಿ ಸದಸ್ಯ ಡಿ.ಕುಪೇಂದ್ರ ರೆಡ್ಡಿ, ಶಾಸಕ ಎಂ.ಕೃಷ್ಣಪ್ಪ, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕ ಮಂಜುನಾಥ್, ಒಕ್ಕಲಿಗ ಸಂಘದ ಪ್ರಧಾನ ಕಾರ್ಯದರ್ಶಿ ಜಯಮುತ್ತು, ನಿರ್ದೇಶಕ ಡಾ.ನಾರಾಯಣ ಸ್ವಾಮಿ, ಕೃಷ್ಣಕುಮಾರ್, ಕುಣಿಗಲ್ ಜಗದೀಶ್, ಕೊಟ್ಟಿಗೆರೆ ಮಂಜುನಾಥ್, ಸಿದ್ದಮರಿಗೌಡ ಕನಕಪುರ ಸೇರಿದಂತೆ ಬಿಜೆಪಿ, ಜೆಡಿಎಸ್‍ನ ಹಲವು ಮುಖಂಡರು ಭಾಗವಹಿಸಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆಗಿಳಿಸಲಿರುವ ಅಭ್ಯರ್ಥಿಯನ್ನು ಶೀಘ್ರ ಆಯ್ಕೆ ಮಾಡಿ ಅಕೃತವಾಗಿ ಪ್ರಕಟಿಸುವಂತೆ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ.

ಚುನಾವಣಾ ವೇಳಾಪಟ್ಟಿ ಪ್ರಕಟವಾಗುವವರೆಗೂ ಕಾಯದೇ ಅಕೃತ ಅಭ್ಯರ್ಥಿಯನ್ನು ಪ್ರಕಟಿಸಬೇಕು. ಅವರ ಗೆಲುವಿಗೆ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಿದ್ದಾರೆ.ಶೀಘ್ರ ಅಭ್ಯರ್ಥಿ ಘೋಷಣೆ ಮಾಡುವ ಮುಖಂಡರ ಆಗ್ರಹಕ್ಕೆ ಎಚ್.ಡಿ.ಕುಮಾರಸ್ವಾಮಿ ಕೂಡ ಸಮ್ಮತಿ ಸೂಚಿಸಿದ್ದಾರೆ. ಎನ್‍ಡಿಎ ಅಭ್ಯರ್ಥಿಯಾಗಿ ಯಾರೇ ಸ್ಪರ್ಧೆಗಿಳಿದರೂ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್‍ರವರು ಸ್ರ್ಪಸಲಿದ್ದಾರೆ ಎಂಬ ವಿಚಾರ ರಾಜಕೀಯವಾಗಿ ಚರ್ಚೆಯಾಗುತ್ತಿದೆ. ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಹಲವು ಸಂಘ ಸಂಸ್ಥೆಗಳು, ಸಾರ್ವಜನಿಕರು ಮಂಜುನಾಥ್ ಅವರಿಗೆ ಮನವಿ ಮಾಡಿದ್ದಾರೆ.ಈ ಮನವಿಗೆ ಮಂಜುನಾಥ್ ಅವರು ಇನ್ನೂ ಅಕೃತ ನಿರ್ಧಾರವನ್ನು ಪ್ರಕಟಿಸಿಲ್ಲ.

RELATED ARTICLES

Latest News