Saturday, September 23, 2023
Homeಇದೀಗ ಬಂದ ಸುದ್ದಿಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಸುಧಾರಣೆ

ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಸುಧಾರಣೆ

- Advertisement -

ಬೆಂಗಳೂರು, ಸೆ.16- ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆರೋಗ್ಯ ಸುಸ್ಥಿತಿಯಲ್ಲಿದೆ. ಚೈತ್ರಾಗೆ ವೈದ್ಯರು ಎಲ್ಲಾ ರೀತಿಯ ವೈದ್ಯಕೀಯ ಪರೀಕ್ಷೆ ನಡೆಸಿದ್ದು , ಕೆಲವು ಪರೀಕ್ಷೆಯ ವರದಿಗಳು ಬರಬೇಕಿದೆ, ಆ ವರದಿಗಳಿಗಾಗಿ ಕಾಯಲಾಗುತ್ತಿದೆ. ಚೈತ್ರಾಳಿಗೆ ಚಿಕಿತ್ಸೆ ಮುಂದುವರೆದಿದ್ದು, ಯಾವಾಗ ಡಿಸ್ಚಾರ್ಜ್ ಮಾಡಬೇಕೆಂದು ಇಂದು ವೈದ್ಯರು ತೀರ್ಮಾನಿಸಲಿದ್ದಾರೆ.

ಇಂದು ಸಿಸಿಬಿ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ವೈದ್ಯರನ್ನು ಭೇಟಿ ಮಾಡಿ ಚೈತ್ರಾ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

- Advertisement -

ಆಸ್ಪತ್ರೆಗೆ ದಾಖಲು:
ಸಿಸಿಬಿ ಪೊಲಿಸರ ವಶದಲ್ಲಿರುವ ಚೈತ್ರಾ ಕುಂದಾಪುರ ನಿನ್ನೆ ಬೆಳಗ್ಗೆ ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸಿಸಿಬಿ ಕಚೇರಿಯಲ್ಲಿ ಚೈತ್ರಾ ಕುಳಿತಿದ್ದಾಗ ಏಕಾಏಕಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಬಾಯಿಯಲ್ಲಿ ನೊರೆ ಬಂದಿದೆ.

ಸಿದ್ದರಾಮಯ್ಯ ಪೂರ್ಣಾವಧಿಗೆ ಸಿಎಂ ಆಗಿರುತ್ತಾರೆ : ಸಚಿವ ರಾಜಣ್ಣ

ತಕ್ಷಣ ಚೈತ್ರಾಳನ್ನು ಸಿಸಿಬಿ ಕಚೇರಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ. ಬಿಜೆಪಿಯಿಂದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ ಚೈತ್ರಾಳನ್ನು ಉಡುಪಿಯಲ್ಲಿ ಬಂಧಿಸಿ ನಗರಕ್ಕೆ ಕರೆತಂದು ಸಿಸಿಬಿ ಪೊಲಿಸರು ವಿಚಾರಣೆ ನಡೆಸಿ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.

#Improvement, #ChaitraKundapur, #health,

- Advertisement -
RELATED ARTICLES
- Advertisment -

Most Popular