Friday, November 22, 2024
Homeರಾಜ್ಯಪರಮೇಶ್ವರ್ ಆಪ್ತನ ಮನೆ ಮೇಲೆ ಐಟಿ ದಾಳಿ

ಪರಮೇಶ್ವರ್ ಆಪ್ತನ ಮನೆ ಮೇಲೆ ಐಟಿ ದಾಳಿ

ಬೆಂಗಳೂರು,ಮೇ2- ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಆಪ್ತ ಎಂ.ಸಿ.ವೇಣುಗೋಪಾಲ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಲ್ಲಿನ ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಅವರ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಆದಾಯ ತೆರಿಗೆ ಪಾವತಿಸದ ಆರೋಪದಡಿ ಈ ದಾಳಿ ನಡೆಸಲಾಗಿದೆ.

3 ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ಮಾಡಿಕೊಳ್ಳದ ಅಕಾರಿಗಳು, ಅಲ್ಲಿಗೇ ತಿಂಡಿ ತರಿಸಿಕೊಂಡು ಕೆಲಸ ಮುಂದುವರಿಸಿದ್ದಾರೆ. ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳ ಕಾರ್ಯಾಚರಣೆಗೆ ಸಹಕರಿಸಿದ್ದಾರೆ ಎನ್ನಲಾಗಿದೆ.

RELATED ARTICLES

Latest News