Saturday, June 7, 2025
Homeರಾಜ್ಯಮೇ ತಿಂಗಳಿನಲ್ಲಿ ರಾಜ್ಯದ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಏರಿಕೆ

ಮೇ ತಿಂಗಳಿನಲ್ಲಿ ರಾಜ್ಯದ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಏರಿಕೆ

Increase in state commercial tax collection in May

ಬೆಂಗಳೂರು, ಜೂ.7– ಮೇ ತಿಂಗಳಿನಲ್ಲಿ 8913.05 ಕೋಟಿ ರೂ. ರಾಜ್ಯದ ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿದೆ. ಇದು ಏಪ್ರಿಲ್ ತಿಂಗಳಿನಿಂದ 352.19 ಕೋಟಿ ರೂ. ಹೆಚ್ಚು ಸಂಗ್ರಹವಾಗಿದೆ. 2024ರ ಮೇ ತಿಂಗಳಿನಲ್ಲಿ 7453.94 ಕೋಟಿ ರೂ. ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿತ್ತು. 1459.11 ಕೋಟಿ ರೂ.ನಷ್ಟು ಕಳೆದ ವರ್ಷಕ್ಕಿಂತ ಹೆಚ್ಚು ಸಂಗ್ರಹವಾಗಿದೆ. ಆದರೆ ಏಪ್ರಿಲ್ ತಿಂಗಳಿನಲ್ಲಿ ಕಳೆದ ವರ್ಷಕ್ಕಿಂತ ಕಡಿಮೆ ತೆರಿಗೆ ಸಂಗ್ರಹಿಸಲಾಗಿತ್ತು.

ಏಪ್ರಿಲ್-ಮೇ ತಿಂಗಳಿನಲ್ಲಿ ಒಟ್ಟು 17,473.91 ಕೋಟಿ ರೂ. ಸಂಗ್ರಹವಾಗಿದೆ. ಇದರಲ್ಲಿ 12,828.09 ಕೋಟಿ ರೂ. ಸರಕು ಸೇವಾ ತೆರಿಗೆ, 4,319.51 ಕೋಟಿ ರೂ. ಕರ್ನಾಟಕ ಮಾರಾಟ ತೆರಿಗೆ ಹಾಗೂ 326.31 ಕೋಟಿ ರೂ. ವೃತ್ತಿ ತೆರಿಗೆ ಸೇರಿದೆ.

ಮೇ ತಿಂಗಳಿನಲ್ಲಿ 6,467.63 ಕೋಟಿ ರೂ. ಸರಕು ಸೇವಾ ತೆರಿಗೆ, 2318.39 ಕೋಟಿ ರೂ. ಮಾರಾಟ ತೆರಿಗೆ ಹಾಗೂ 126.83 ಕೋಟಿ ರೂ. ವೃತ್ತಿ ತೆರಿಗೆ ಸಂಗ್ರಹಿಸಲಾಗಿದ್ದು, ಏಪ್ರಿಲ್‌ಗಿಂತ ಮ ತಿಂಗಳಿನಲ್ಲಿ ಸರಕು ಸೇವಾ ತೆರಿಗೆ ಮತ್ತು ಮಾರಾಟ ತೆರಿಗೆಯಲ್ಲಿ ಏರಿಕೆ ಕಂಡುಬಂದರೆ, ವೃತ್ತಿ ತೆರಿಗೆಯಲ್ಲಿ ಇಳಿಕೆಯಾಗಿದೆ.

2024-25ನೇ ಆರ್ಥಿಕ ಸಾಲಿನಲ್ಲಿ ಒಟ್ಟು 1,02,585.52 ಕೋಟಿ ರೂ. ವಾಣಿಜ್ಯ ತೆರಿಗೆಗಳನ್ನು ಸಂಗ್ರಹಿಸಲಾಗಿತ್ತು. ಈ ಬಾರಿ ಇದಕ್ಕಿಂತಲೂ ಹೆಚ್ಚು ಸಂಗ್ರಹ ಮಾಡುವ ಗುರಿಯನ್ನು ವಾಣಿಜ್ಯ ತೆರಿಗೆ ಇಲಾಖೆ ಹಾಕಿಕೊಂಡಿದೆ.

RELATED ARTICLES

Latest News