ಮೀಸಲಾತಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ, ಪ್ರತಿಭಟನೆ ಕೈಬಿಟ್ಟ ಪ್ರಸನ್ನಾನಂದ ಸ್ವಾಮೀಜಿ

Social Share

ಬೆಂಗಳೂರು,ಅ.24-ಪರಿಶಿಷ್ಟ ಜಾತಿ , ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಿಸುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುತ್ತಿದ್ದಂತೆ ವಾಲ್ಮೀಕಿ ಪೀಠದ ಸ್ವಾಮೀಜಿ ತಮ್ಮ ನಿರಶನವನ್ನು ಕೊನೆಗೂ ಹಿಂತೆಗೆದುಕೊಂಡಿದ್ದಾರೆ.

ಕಳೆದ 220ಕ್ಕೂ ಹೆಚ್ಚು ದಿನಗಳಿಂದ ಪರಿಶಿಷ್ಟ ವರ್ಗಗಳಿಗೆ ಮೀಸಲಾತಿ ಹೆಚ್ಚಿಸಬೇಕೆಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ವಾಲ್ಮೀಕಿ ಪೀಠದ ಪೀಠಾಧ್ಯಕ್ಷರಾಗಿರುವ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು.

ಕಾರ್ಗಿಲ್‍ನಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಇದೀಗ ಸರ್ಕಾರ ಎಸ್ಸಿಗೆ ಶೇ.15ರಿಂದ 17 ಹಾಗೂ ಪರಿಶಿಷ್ಟ ವರ್ಗಕ್ಕೆ ಶೇ.3ರಿಂದ 7ರಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಸುಗ್ರಿವಾಜ್ಞೆಗೆ ಭಾನುವಾರ ಕಾರ್ಯಂಗದ ಮುಖ್ಯಸ್ಥರು ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಸಹಿ ಹಾಕಿರುವುದರಿಂದ ತತ್‍ಕ್ಷಣವೇ ಕಾಯ್ದೆ ಅನುಷ್ಠಾನಕ್ಕೆ ಬರಲಿದೆ. ಹೀಗಾಗಿ ತಮ್ಮ ಸಮುದಾಯದ ಬಹು ದಶಕಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದ್ದರಿಂದ ತಾವು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿರುವುದಾಗಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಘೋಷಿಸಿದ್ದಾರೆ.

ಸ್ಪರ್ಧೆಯಿಂದ ಹಿಂದೆ ಸರಿದ ಜಾನ್ಸನ್‌, ರಿಷಿ ಬ್ರಿಟನ್‍ ಪ್ರಧಾನಿಯಾಗೋದು ಫಿಕ್ಸ್

ಇದು ನಮ್ಮ ಹೋರಾಟಕ್ಕೆ ಸಿಕ್ಕ ಪ್ರತಿಫಲ. ಸಮುದಾಯದ ಬೇಡಿಕೆಯನ್ನು ಈಡೇರಿಸಿದ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ನಮ್ಮ ಬಹುದಿನಗಳ ಹೋರಾಟವನ್ನು ಸೋಮವಾರದಿಂದಲೆ ಅನ್ವಯವಾಗುವಂತೆ ಅಂತ್ಯಗೊಳಿಸುತ್ತೇವೆ ಎಂದು ಸ್ವಾಮೀಜಿ ಹೇಳಿದರು.

Articles You Might Like

Share This Article